ಪಕ್ಷ ಬಲಪಡಿಸಲು ಸಲಹೆ

ಲೋಕಬಂಧು ವಾರ್ತೆ
ಬುಧವಾರ, ಸೆಪ್ಟೆಂಬರ್ 13


ಪಕ್ಷ ಬಲಪಡಿಸಲು ಸಲಹೆ
ಉಡುಪಿ: ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ತಮ್ಮ ಅಧಿಕಾರವನ್ನು ಉಪಯೋಗಿಸಿ ತಮ್ಮ ಕ್ಷೇತ್ರದ ಅಭಿವೃದ್ಧಿ ನಡೆಸಿ. ಜೊತೆಗೆ ಪಕ್ಷ ಬಲಪಡಿಸಿ ಎಂದು ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಪಕ್ಷ ಕಾರ್ಯಕರ್ತರಿಗೆ ಸಲಹೆ ನೀಡಿದರು.

ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಆರ್.ಜಿ.ಪಿಆರ್.ಎಸ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಬೆಂಬಲಿತ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಮಾಜಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ನಡೆದ ಅಭಿನಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮುಂದಿನ ತಿಂಗಳ 3 ಮತ್ತು 4ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಮಂಗಳೂರು ಮತ್ತು ಉಡುಪಿಯಲ್ಲಿ ಪಂಚಾಯತ್ ರಾಜ್ ಬೃಹತ್ ಸಮಾವೇಶ ನಡೆಸಲುದ್ದೇಶಿಸಲಾಗಿದೆ ಎಂದರು.


ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೇಲಿಯೊ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಜಿಲ್ಲಾ ಸಂಯೋಜಕಿ ರೋಶಿನಿ ಒಲಿವರಾ, ಡಾ. ಸುನಿತಾ ಡಿ ಶೆಟ್ಟಿ, ಬಿ. ನರಸಿಂಹಮೂರ್ತಿ, ನಾಗೇಶ್ ಉದ್ಯಾವರ, ದಿನೇಶ್ ಪುತ್ರನ್, ಕುಶಾಲ್ ಶೆಟ್ಟಿ, ಗೀತಾ ವಾಗ್ಳೆ, ಅಣ್ಣಯ್ಯ ಸೇರಿಗಾರ್, ಜಯರಾಮ್, ಶಶಿಧರ್ ಶೆಟ್ಟಿ, ಬ್ಲಾಕ್ ಅಧ್ಯಕ್ಷರಾದ ಮದನ್ ಕುಮಾರ್, ಪ್ರದೀಪ್ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ, ಶಂಕರ್ ಕುಂದರ್, ದಿನಕರ್ ಹೇರೂರು, ರಮೇಶ್ ಕಾಂಚನ್, ಸದಾಶಿವ ದೇವಾಡಿಗ, ನವೀನ್ ಚಂದ್ರ ಸುವರ್ಣ, ಹರೀಶ್ ಕಿಣಿ, ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ ಮೊದಲಾದವರಿದ್ದರು.