ಹೆಗ್ಗಡೆಯವರನ್ನು ಭೇಟಿ ಮಾಡಿದ ಪುತ್ತಿಗೆ ಪರ್ಯಾಯ ಸ್ವಾಗತ ಸಮಿತಿ

 


ಲೋಕಬಂಧು ವಾರ್ತೆ
ಸೋಮವಾರ, ಸೆಪ್ಟೆಂಬರ್ 11

ಹೆಗ್ಗಡೆಯವರನ್ನು ಭೇಟಿ ಮಾಡಿದ ಪುತ್ತಿಗೆ ಪರ್ಯಾಯ ಸ್ವಾಗತ ಸಮಿತಿ
ಉಡುಪಿ: ಪುತ್ತಿಗೆ ಮಠದ ಪರ್ಯಾಯ ಸ್ವಾಗತ ಸಮಿತಿ ಸೋಮವಾರ ಧರ್ಮಸ್ಥಳ ಧರ್ಮಾಧಿಕಾರಿ ರಾಜರ್ಷಿ ಡಾl ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ, ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಅಪೇಕ್ಷೆಯಂತೆ ತಮ್ಮ ಚತುರ್ಥ ಪರ್ಯಾಯದ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಸ್ಥಾನ ಅಲಂಕರಿಸುವಂತೆ ವಿನಂತಿಸಿತು.

ಅಂತೆಯೇ ಈ ತಿಂಗಳ 16ರ ಅಪರಾಹ್ನ 4 ಗಂಟೆಗೆ ಪರ್ಯಾಯ ಸ್ವಾಗತ ಸಮಿತಿ ಕಾರ್ಯಾಲಯ ಉದ್ಘಾಟನೆ ಹಾಗೂ ಲಾಂಛನ ಬಿಡುಗೊಡೆಗೊಳಿಸಲು ಉಡುಪಿಗೆ ಆಗಮಿಸುವಂತೆ ವಿನಂತಿಸಿದರು.

ಮಠದ ದಿವಾನ ನಾಗರಾಜ ಆಚಾರ್ಯ, ಸಮಿತಿ ಕಾರ್ಯಾಧ್ಯಕ್ಷ ಕೆ. ರಘುಪತಿ ಭಟ್, ಪ್ರಧಾನ ಕಾರ್ಯದರ್ಶಿ ಬೆಳಪು ದೇವಿಪ್ರಸಾದ ಶೆಟ್ಟಿ, ಕೋಶಾಧಿಕಾರಿ ರಂಜನ್ ಕಲ್ಕೂರ, ಸಂಚಾಲಕರಾದ ಜಯಕರ ಶೆಟ್ಟಿ, ಪ್ರವೀಣ್ ಶೆಟ್ಟಿ, ಸಂತೋಷ್ ಶೆಟ್ಟಿ, ನಯೇಶ್ ಶೆಟ್ಟಿ, ರಾಘವೇಂದ್ರ ಕಿಣಿ, ರಮೇಶ್ ಭಟ್ ಕೆ., ರವೀಂದ್ರ ಆಚಾರ್ಯ ಇದ್ದರು.