ಎಲ್ಲಾ ಜಿಲ್ಲೆಗಳಲ್ಲೂ ಸೂಕ್ಷ್ಮ ಗಮನ
Sunday, October 29, 2023
ಉಡುಪಿ, ಅ.29 (ಲೋಕಬಂಧು ವಾರ್ತೆ): ಕೇರಳ ಬಾಂಬ್ ಸ್ಪೋಟ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಸೂಕ್ಷ್ಮ ಗಮನ ಇರಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.ವಿಶ್ವ ಬಂಟರ ಸಮ್ಮೇಳನಕ್ಕೆ ಭಾನುವಾರ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಕೇರಳದಲ್ಲಿ ನಡೆದ ಅಹಿತಕರ ಘಟನೆ ರಾಜ್ಯದಲ್ಲಿ ನಡೆಯಕೂಡದು ಎಂಬ ನಿಟ್ಟಿನಲ್ಲಿ ಸೂಕ್ಷ್ಮ ನಿಗಾ ವಹಿಸುವಂತೆ ರಾಜ್ಯದ ಎಲ್ಲಾ ಎಸ್ಪಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ ಅವರು, ವಿವಿಧ ಸಂಘಟನೆಗಳು ಹಾಗೂ ವ್ಯಕ್ತಿಗಳ ಬಗ್ಗೆಯೂ ನಿಗಾ ವಹಿಸಲು ಸೂಚಿಸಿರುವುದಾಗಿ ತಿಳಿಸಿದರು.
ಮುಖ್ಯಮಂತ್ರಿ ಬದಲಾವಣೆ ವಿಚಾರ ಮಾಧ್ಯಮ ಸೃಷ್ಟಿ ಎಂದ ಡಾ. ಪರಮೇಶ್ವರ, ಈ ಬಗ್ಗೆ ಕಾಂಗ್ರೆಸ್ ನವರಾರೂ ಹೇಳಿದ್ದಾರೆಯೇ ಎಂದು ಪ್ರಶ್ನಿಸಿದರು.
ಬಿಜೆಪಿಯವರನ್ನು ಕೇಳಿ ನಾವು ಆಡಳಿತ ನಡೆಸುತ್ತಿಲ್ಲ. ಅವರು ಐದು ವರ್ಷ ಕಾಯಲಿ ಎಂದು ಹೇಳಿದರು.
ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಅವ್ಯವಹಾರ ಬಗ್ಗೆ ಪೊಲೀಸ್ ವರದಿ ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.