ಸಾಂಸ್ಕೃತಿಕ ರಂಗಕ್ಕೆ ಬಂಟ ಸಮುದಾಯದ ಕೊಡುಗೆ ಅಪಾರ
Sunday, October 29, 2023
ಉಡುಪಿ, ಅ.29 (ಲೋಕಬಂಧು ವಾರ್ತೆ): ಸಾಂಸ್ಕೃತಿಕ ರಂಗಕ್ಕೆ ಬಂಟ ಸಮಾಜದ ಕೊಡುಗೆ ಅಪಾರ ಎಂದು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಮಿಜಾರುಗುತ್ತು ಡಾ. ಮೋಹನ ಆಳ್ವ ಹೇಳಿದರು.ಭಾನುವಾರ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣ ಅವರಣದಲ್ಲಿ ನಡೆದ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಉದ್ಘಾಟಿಸಿ ಮಾತನಾಡಿದರು.ಅವಿಭಜಿತ ದ.ಕ. ಜಿಲ್ಲೆಯಲ್ಲಿ ಯಕ್ಷಗಾನ ಕ್ಷೇತ್ರವನ್ನು ಕಟ್ಟಿ ಬೆಳೆಸುವಲ್ಲಿ ಬಂಟ ಸಮಾಜದ ಕಲಾವಿದರ ಕಲಾ ಪೋಷಕರು ಅತೀ ಹೆಚ್ಚು ಕೊಡುಗೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಉದ್ಯಮಿ ಪುರುಷೋತ್ತಮ ಶೆಟ್ಟಿ, ರಾಜೇಂದ್ರ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು.