ಉಡುಪಿ, ನ.10 (
ಲೋಕಬಂಧು ವಾರ್ತೆ): ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಉಡುಪಿ
ಹಾಜಿ ಅಬ್ದುಲ್ಲಾ ಪರ್ಕಳ ಹಾಗೂ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ
ಆಯಿಶಾ ಬಾನು ಕಾರ್ಕಳ ಅವರಿಗೆ ಜಮಾಅತೆ ಇಸ್ಲಾಮೀ ಹಿಂದ್ ಉಡುಪಿ ಜಿಲ್ಲೆ ವತಿಯಿಂದ ನವೆಂಬರ್ 12ರಂದು ಅಭಿನಂದಿಸಲಾಗುವುದು.
ಅಂದು ಸಂಜೆ 6.30 ಗಂಟೆಗೆ ಸಂಭಾಗಣದಲ್ಲಿ ನಡೆಯುವ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಉದ್ಯಮಿ ಪ್ರಸಾದ್ ರಾಜ್ ಕಾಂಚನ್ ಮತ್ತು ಮಂಗಳೂರು ಶಾಂತಿ ಪ್ರಕಾಶನದ ವ್ಯವಸ್ಥಾಪಕ ಮಹಮ್ಮದ್ ಕುಂಞಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.