
Sahithya Sammelana: ಉಡುಪಿ ತಾಲೂಕು 14ನೇ ಸಾಹಿತ್ಯ ಸಮ್ಮೇಳನ: ಎಚ್. ಶಾಂತರಾಜ ಐತಾಳ ಸರ್ವಾಧ್ಯಕ್ಷ
Thursday, November 16, 2023
ಉಡುಪಿ, ನ.16 (ಲೋಕಬಂಧು ವಾರ್ತೆ): ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಉಡುಪಿ ತಾಲೂಕು ಘಟಕ ಆಶ್ರಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ 14ನೇ ಅಧಿವೇಶನದ ಸರ್ವಾಧ್ಯಕ್ಷರಾಗಿ ಸಾಹಿತಿ, ಸಂಘಟಕ, ವಿಮರ್ಶಕ, ಸಾಮಾಜಿಕ ಕಳಕಳಿಯ ಎಚ್. ಶಾಂತರಾಜ ಐತಾಳ ಆಯ್ಕೆಯಾಗಿದ್ದಾರೆ ಎಂದು ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ತಿಳಿಸಿದ್ದಾರೆ.
ಡಿಸೆಂಬರ್ 30ರಂದು ಮಣಿಪಾಲದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಶ್ರೀ ರಮಾನಂದ ಸ್ಮೃತಿ ಮಂಟಪದಲ್ಲಿ ಸಮ್ಮೇಳನ ನಡೆಯಲಿದೆ.
ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆಯನ್ನು ಉಡುಪಿ ತಾಲೂಕು ಅಧ್ಯಕ್ಷ ರವಿರಾಜ ಎಚ್.ಪಿ. ಉಪಸ್ಥಿತಿಯಲ್ಲಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಘೋಷಿಸಿದರು ಎಂದು ಕಸಾಪ ಉಡುಪಿ ತಾಲೂಕು ಕಾರ್ಯದರ್ಶಿ ಜನಾರ್ದನ ಕೊಡವೂರು ತಿಳಿಸಿದ್ದಾರೆ.