ನ. 18: ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನದ ವಾರ್ಷಿಕೋತ್ಸವ
Thursday, November 16, 2023
ಉಡುಪಿ, ನ.16 (ಲೋಕಬಂಧು ವಾರ್ತೆ): ಪರ್ಯಾಯ ಕೃಷ್ಣಾಪುರ ಶ್ರೀಕೃಷ್ಣ ಮಠ ಹಾಗೂ ಸೋದೆ ಮಠ ಆಶ್ರಯದಲ್ಲಿ ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ನಡೆಯುತ್ತಿರುವ ತೆಂಕುತಿಟ್ಟು ಯಕ್ಷಗಾನ ಅಧ್ಯಯನ ಕೇಂದ್ರದ 6ನೇ ವಾರ್ಷಿಕೋತ್ಸವಬಶ್ರೀ ಕೃಷ್ಣಮಠ ರಾಜಾಂಗಣದಲ್ಲಿ ನ.18ರಂದು ಅಪರಾಹ್ನ 3 ಗಂಟೆಯಿಂದ ನಡೆಯಲಿದೆ.ಸಭಾ ಕಾರ್ಯಕ್ರಮದ ಅಭ್ಯಾಗತರಾಗಿ ಪ್ರಸಿದ್ಧ ಭಾಗವತ ರಾಮಕೃಷ್ಣ ಮಯ್ಯ ಸಿರಿಬಾಗಿಲು, ಸುರತ್ಕಲ್ ನಾಟ್ಯಾಂಜಲಿ ಕಲಾ ಅಕಾಡೆಮಿ ನಿರ್ದೇಶಕ ವಿದ್ವಾನ್ ಚಂದ್ರಶೇಖರ ನಾವಡ ಮತ್ತು ಯಕ್ಷಗಾನ ಕಲಾಪೋಷಕ ಶಶಿಕಾಂತ ಭಟ್ ಆಗಮಿಸುವರು.
ಯಕ್ಷಗುರು ರಾಕೇಶ್ ರೈ ಅಡ್ಕ ಮತ್ತು ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನದ ಸಂಯೋಜಕಿ ಗೋಪಿಕಾ ಮಯ್ಯ ಉಪಸ್ಥಿತರಿರುವರು.
ಬಳಿಕ ಯಕ್ಷಗುರು ರಾಕೇಶ್ ರೈ ಅಡ್ಕ ಶಿಷ್ಯಂದಿರಿಂದ ಏತದ್ಧಿ ರಾಮಾಯಣಂಮ್ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಕಾರ್ಯಕ್ರಮ ಮಲ್ಯಾಡಿ ಲೈವ್ ಯುಟ್ಯೂಬ್ ಚಾನೆಲ್ ನಲ್ಲಿ ನೇರ ಪ್ರಸಾರಗೊಳ್ಳಲಿದೆ.
ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನ 100ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ತೆಂಕುತಿಟ್ಟು ಯಕ್ಷಗಾನ ತರಬೇತಿಯನ್ನು ಸಮರ್ಥ ಗುರು ರಾಕೇಶ್ ರೈ ಅಡ್ಕ ಮೂಲಕ ಉಚಿತವಾಗಿ ನೀಡುತ್ತಿದೆ.
ಪ್ರತಿಷ್ಠಾನದ ಈ ಕಾರ್ಯಕ್ಕೆ ಸೋದೆ ಮಠಾಧೀಶ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ತಮ್ಮ ಮಠದಲ್ಲಿ ಸ್ಥಳಾವಕಾಶ ಕಲ್ಪಿಸಿಕೊಡುತ್ತಿದ್ದಾರೆ.
ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.