-->
Journalist: ನ.21: ಪತ್ರಕರ್ತರ ಜಿಲ್ಲಾ ಸಮ್ಮೇಳನ

Journalist: ನ.21: ಪತ್ರಕರ್ತರ ಜಿಲ್ಲಾ ಸಮ್ಮೇಳನ

ಮಂಗಳೂರು, ನ.17 (ಲೋಕಬಂಧು ವಾರ್ತೆ): ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ನ. 21ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬೆಳಿಗ್ಗೆ 9ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. 10 ಗಂಟೆಗೆ ಸಮ್ಮೇಳನದ ಉದ್ಘಾಟನಾ ಸಮಾರಂಭ ನಡೆಯಲಿದೆ.

ಸಮ್ಮೇಳನದಲ್ಲಿ ಪತ್ರಿಕೋದ್ಯಮದ ಹೊಸ ಆಯಾಮಗಳು ವಿಷಯದಲ್ಲಿ ಸಮ್ಮೇಳನದ ಪ್ರಮುಖ ಗೋಷ್ಠಿ ನಡೆಯಲಿದೆ. ಗೋಷ್ಠಿಯನ್ನು ಉದಯವಾಣಿ ದೈನಿಕದ ಸಂಪಾದಕ ಅರವಿಂದ ನಾವಡ ಅಧ್ಯಕ್ಷತೆಯಲ್ಲಿ ವಿಜಯ ಕರ್ನಾಟಕ ಸ್ಥಾನೀಯ ಸಂಪಾದಕ ಬಿ. ರವೀಂದ್ರ ಶೆಟ್ಟಿ ಮತ್ತು ಡೆಕ್ಕನ್ ಹೆರಾಲ್ಡ್ ಪತ್ರಿಕೆ ಮಂಗಳೂರು ಬ್ಯೂರೋ ಮುಖ್ಯಸ್ಥ ಹರ್ಷ ವಿಷಯ ಮಂಡನೆ ಮಾಡಲಿದ್ದಾರೆ.

ಸಮ್ಮೇಳನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕು ಘಟಕಗಳ ಪತ್ರಕರ್ತ ಪ್ರತಿನಿಧಿಗಳ ಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ, ಛಾಯಾಚಿತ್ರ ಪ್ರದರ್ಶನ ನಡೆಯಲಿದೆ.

ಶಾಸಕರಾದ ವೇದವ್ಯಾಸ ಕಾಮತ್ ಸ್ಮರಣ ಸಂಚಿಕೆ ಅನಾವರಣಗೊಳಿಸಲಿದ್ದಾರೆ. ಡಾ. ವೈ. ಭರತ್ ಶೆಟ್ಟಿ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಲಿದ್ದಾರೆ. ಹರೀಶ್ ಪೂಂಜಾ ಹಸಿರು- ಉಸಿರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಮ್ಮೇಳನದ ಕಾರ್ಯಕ್ರಮಗಳಿಗೆ ರಾಜೇಶ್ ನಾಯ್ಕ್ ಚಾಲನೆ ನೀಡಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಆಶಯ ಭಾಷಣ ಮಾಡಲಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಸಮ್ಮೇಳನದ ಕಿಟ್ ಬಿಡುಗಡೆಗೊಳಿಸಲಿದ್ದಾರೆ.

ಸಮಾರಂಭದಲ್ಲಿ ಶಾಸಕರಾದ ಅಶೋಕ್ ಕುಮಾರ್ ರೈ ಮತ್ತು ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯರಾದ ಡಾl ಮಂಜುನಾಥ ಭಂಡಾರಿ, ಪ್ರತಾಪಸಿಂಹ ನಾಯಕ್, ಬಿ.ಎಂ. ಫಾರೂಕ್ ಮತ್ತು ಭೋಜೇ ಗೌಡ, ಪಶ್ಚಿಮ ವಲಯ ಐಜಿಪಿ ಚಂದ್ರ ಗುಪ್ತ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಡಾ. ಇಫ್ತಿಕಾರ್ ಅಲಿ, ಕೆನರಾ ಬ್ಯಾಂಕ್ ಮಹಾಪ್ರಬಂಧಕ ಸುಧಾಕರ ಕೊಟ್ಟಾರಿ, ಬ್ಯಾಂಕ್ ಆಫ್ ಬರೋಡಾದ ಮಹಾ ಪ್ರಬಂಧಕಿ ಮತ್ತು ವಲಯ ಮುಖಸ್ಥೆ ಗಾಯತ್ರಿ, ಶ್ರೀರಾಮ್ ಫೈನಾನ್ಸ್ ಝೋನಲ್ ಹೆಡ್ ಶರತ್‌ಚಂದ್ರ ಭಟ್ ಕಾಕುಂಜೆ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ಸುಚರಿತ ಶೆಟ್ಟಿ, ಇಂಡಿಯನ್ ರೆಡ್ ಕ್ರಾಸ್‌ ಸೊಸೈಟಿ ಅಧ್ಯಕ್ಷ ಶಾಂತರಾಮ ಶೆಟ್ಟಿ, ಕ್ರೆಡಾಯಿ ಮಂಗಳೂರು ಅಧ್ಯಕ್ಷ ವಿನೋದ್ ಎ. ಆರ್. ಪಿಂಟೊ, ಮಂಗಳೂರು ಪ್ರೆಸ್ ಕ್ಲಬ್‌ ಅಧ್ಯಕ್ಷ ಪಿ. ಬಿ. ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಶ್ರೀನಿವಾಸ ನಾಯಕ್ ಇಂದಾಜೆ ತಿಳಿಸಿದರು.

ಸುದ್ದಿ ಗೋಷ್ಠಿಯಲ್ಲಿ ಮಂಗಳೂರು ಪ್ರೆಸ್ ಕ್ಲಬ್‌ ಅಧ್ಯಕ್ಷ ಪಿ.ಬಿ. ಹರೀಶ್ ರೈ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪ ರಾಜ್ ಬಿ. ಎನ್. ಇದ್ದರು.

Ads on article

Advertise in articles 1

advertising articles 2

Advertise under the article