.jpg)
kabaddi: ನ. 23ರಿಂದ ಅ. ಭಾ. ಅಂತರ ವಿ.ವಿ. ಕಬಡ್ಡಿ ಪಂದ್ಯಾಟ
Monday, November 20, 2023
ಉಡುಪಿ, ನ.20 (ಲೋಕಬಂಧು ವಾರ್ತೆ): ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಪೂರ್ಣಪ್ರಜ್ಞ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಕಬಡ್ಡಿ ಪಂದ್ಯಾಟ ನ. 23ರಿಂದ 26ರ ವರೆಗೆ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನಡೆಯಲಿದೆ ಎಂದು ಪೂರ್ಣಪ್ರಜ್ಞ ಕಾಲೇಜಿನ ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ಡಾ. ಜಿ. ಎಸ್. ಚಂದ್ರಶೇಖರ್ ತಿಳಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನ. 23ರಂದು ಬೆಳಿಗ್ಗೆ 7 ಗಂಟೆಗೆ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಭೂಮಿಪೂಜೆ ನೆರವೇರಿಸುವ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಲಿದ್ದಾರೆ.
ಉದ್ಘಾಟನೆ
ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಕಬಡ್ಡಿ ಕ್ರೀಡೆಯಲ್ಲಿ ಅರ್ಜುನ ಪ್ರಶಸ್ತಿ ಪುರಸ್ಕೃತ ಹಾಗೂ ವಿಶ್ವಕಪ್ ಕಬಡ್ಡಿ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ವಿಜೇತ ರಾಕೇಶ್ ಕುಮಾರ್ ವಿಶೇಷ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ| ಜಯರಾಜ್ ಅಮೀನ್ ಅಧ್ಯಕ್ಷತೆ ವಹಿಸಲಿದ್ದಾರೆ.
ಶಾಸಕರಾದ ಯಶಪಾಲ್ ಸುವರ್ಣ ಮತ್ತು ಸುರೇಶ್ ಶೆಟ್ಟಿ ಗುರ್ಮೆ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ| ಜಿ ಶಂಕರ್, ಮುನಿಯಾಲು ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮುನಿಯಾಲು ಉದಯಕುಮಾರ್ ಶೆಟ್ಟಿ, ಅದಮಾರು ಮಠ ಶಿಕ್ಷಣ ಮಂಡಳಿ ಆಡಳಿತಾಧಿಕಾರಿ ಡಾ| ಎ. ಪಿ. ಭಟ್, ಪೂರ್ಣಪ್ರಜ್ಞ ಕಾಲೇಜು ಆಡಳಿತ ಮಂಡಳಿ ಗೌರವ ಕೋಶಾಧಿಕಾರಿ ಪ್ರಶಾಂತ್ ಹೊಳ್ಳ, ಪೂರ್ಣಪ್ರಜ್ಞ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ| ಬಿ. ಎನ್. ಸೋಮಯಾಜಿ, ಕಾಲೇಜಿನ ಪ್ರಾಂಶುಪಾಲ ಡಾ| ರಾಮು ಎಲ್. ಉಪಸ್ಥಿತರಿರುವರು ಎಂದರು.
ಪ್ರಜ್ಞಾ ಗೌರವ
25ರಂದು ಸಂಜೆ 6 ಗಂಟೆಗೆ ಪ್ರಜ್ಞಾ ಗೌರವ ಸಮಾರಂಭ ನಡೆಯಲಿದ್ದು, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಸಾಧನೆಗೈದ ಕಾಲೇಜಿನ 13 ಮಂದಿ ಹಳೆ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು.
ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗೂ ಅದಮಾರು ಮಠ ಶಿಕ್ಷಣ ಮಂಡಳಿ ಅಧ್ಯಕ್ಷ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಲಿದ್ದಾರೆ.
ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ರಘುಪತಿ ಭಟ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಉದ್ಯಮಿ ಪ್ರಸಾದರಾಜ್ ಕಾಂಚನ್, ಗಿರೀಶ್ ಶೆಟ್ಟಿ ತೆಳ್ಳಾರ್, ಅದಮಾರು ಪೂರ್ಣಪ್ರಜ್ಞ ಪಿಯು ಕಾಲೇಜಿನ ಗೌರವ ಕಾರ್ಯದರ್ಶಿ ಡಾ. ಶ್ರೀಧರ ರಾವ್, ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಇಲಾಖೆ ನಿರ್ದೇಶಕ ಡಾ| ಜೆರಾಲ್ಡ್ ಎಸ್. ಡಿ'ಸೋಜಾ, ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ| ಕಿಶೋರ್ ಕುಮಾರ್ ಸಿ. ಕೆ, ಉಡುಪಿ ಪೂರ್ಣಪ್ರಜ್ಞ ಕಾಲೇಜು ಪ್ರಾಂಶುಪಾಲ ಡಾ| ರಾಮು ಎಲ್. ಉಪಸ್ಥಿತರಿರುವರು.
ಉಡುಪಿ ಪೂರ್ಣಪ್ರಜ್ಞ ಕಾಲೇಜು ಆಡಳಿತ ಸಮಿತಿ ಗೌರವ ಕಾರ್ಯದರ್ಶಿ ಡಾ| ಜಿ.ಎಸ್. ಚಂದ್ರಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಸಮಾರೋಪ
ಕ್ರೀಡಾಕೂಟ ಸಮಾರೋಪ 26ರಂದು ಸಂಜೆ 6 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.
ಅದಮಾರು ಮಠ ಎಜುಕೇಶನ್ ಕೌನ್ಸಿಲ್ ಅಧ್ಯಕ್ಷ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಉಪಸ್ಥಿತರಿರುವರು.
ವಿಧಾನಸಭೆ ಸಭಾಪತಿ ಯು. ಟಿ. ಖಾದರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಪಿ. ಎಸ್. ದಿನೇಶ್ ಕುಮಾರ್, ಮಂಗಳೂರು ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ರಾಜು ಕೆ., (ಕೆಎಎಸ್), ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಪೂರ್ಣಪ್ರಜ್ಞ ಪಿಯು ಕಾಲೇಜಿನ ಕಾರ್ಯದರ್ಶಿ ಡಾ. ಶಶಿಕಿರಣ್ ಉಮಾಕಾಂತ್, ಪೂರ್ಣಪ್ರಜ್ಞ ಪಿಯು ಕಾಲೇಜು ಕೋಶಾಧಿಕಾರಿ ಗಣೇಶ್ ಹೆಬ್ಬಾರ್, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ| ರೋಶನ್ ಕುಮಾರ್ ಶೆಟ್ಟಿ, ಉದ್ಯಮಿ ದಿನೇಶ್ ಪುತ್ರನ್, ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ಡಾ| ರಾಮು ಎಲ್ ಉಪಸ್ಥಿತರಿರುವರು.
ಉಡುಪಿಯ ಪೂರ್ಣಪ್ರಜ್ಞ ಕಾಲೇಜು ಆಡಳಿತ ಸಮಿತಿಯ ಗೌರವ ಕಾರ್ಯದರ್ಶಿ ಡಾ. ಜಿ.ಎಸ್. ಚಂದ್ರಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಇಲಾಖೆ ನಿರ್ದೇಶಕ ಡಾ| ಜೆರಾಲ್ಡ್ ಸಂತೋಷ್ ಡಿ'ಸೋಜ, ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ| ಕಿಶೋರ್ ಕುಮಾರ್ ಸಿ.ಕೆ, ಕಾಲೇಜಿನ ಪ್ರಾಂಶುಪಾಲ ಡಾ| ರಾಮು ಎಲ್., ಎಐಐಯು ಕಬಡ್ಡಿ ಪಂದ್ಯಾವಳಿ ಸಂಯೋಜಕ ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ ಮುಖ್ಯಸ್ಥ ಸುಕುಮಾರ್ ಸುದ್ದಿಗೋಷ್ಟಿಯಲ್ಲಿದ್ದರು.