-->
Blood donation: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ರಕ್ತದಾನ ಶಿಬಿರ

Blood donation: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ರಕ್ತದಾನ ಶಿಬಿರ

ಬ್ರಹ್ಮಾವರ, ನ.10 (ಲೋಕಬಂಧು ವಾರ್ತೆ): ಇಲ್ಲಿನ  ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಶುಕ್ರವಾರ ರಕ್ತದಾನ ಶಿಬಿರ ಆಯೋಜಿಸಲಾಯಿತು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಘಟಕ ಅಧ್ಯಕ್ಷ  ಜಯಕರ ಶೆಟ್ಟಿ ಮತ್ತು ವಿದ್ಯಾಲಕ್ಷ್ಮೀ  ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಸುಬ್ರಹ್ಮಣ್ಯ ರಕ್ತದಾನ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

100ಕ್ಕೂ ಅಧಿಕ  ಮಂದಿ ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ಉಪನ್ಯಾಸಕೇತರರು ರಕ್ತದಾನ  ಮಾಡಿದರು.
ಎಚ್.ಡಿ.ಎಫ್.ಸಿ ಬ್ಯಾಂಕ್ ಪ್ರಬಂಧಕಿ ದೀಕ್ಷಾ, ಸೀತಾರಾಮ್ , ಗಣೇಶ್ ಆಚಾರ್, ವೀರೇಂದ್ರ, ವಿದ್ಯಾಲಕ್ಷ್ಮಿ ಕಾಲೇಜು ಸಂಸ್ಥಾಪಕ ಸುಬ್ರಹ್ಮಣ್ಯ, ನಿರ್ದೇಶಕಿ ಮಮತಾ,  ಪ್ರಾಂಶುಪಾಲೆ ಡಾl ಸೀಮಾ ಜಿ. ಭಟ್, ಕಾಲೇಜಿನ ರೆಡ್ ಕ್ರಾಸ್ ಘಟಕ ಸಂಚಾಲಕಿ ಉಪನ್ಯಾಸಕಿ ಶೈಲಾ ಮೊದಲಾದವರಿದ್ದರು.

Ads on article

Advertise in articles 1

advertising articles 2

Advertise under the article