Bommai: ವಿಶ್ವ ಕಪ್ ಗೆಲುವಿಗೆ ಬೊಮ್ಮಾಯಿ ಹಾರೈಕೆ
Sunday, November 19, 2023
ಬೆಂಗಳೂರು, ನ.18 (ಲೋಕಬಂಧು ವಾರ್ತೆ): ಭಾರತ- ಆಸ್ಟ್ರೇಲಿಯಾ ನಡುವಿನ ವಿಶ್ವ ಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಜಯ ಗಳಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾರೈಸಿದ್ದಾರೆ.ಈ ಕುರಿತು ಟ್ವಿಟ್ ಮಾಡಿದ ಅವರು, ಭಾರತ- ಆಸ್ಟ್ರೇಲಿಯಾ ನಡುವಿನ ಪಂದ್ಯಾಟ ನೋಡಲು ಇಡೀ ಜಗತ್ತಿನ ಕ್ರಿಕೆಟ್ ಅಭಿಮಾನಿಗಳು ಕಾತರರಾಗಿದ್ದಾರೆ.
ನಾನೂ ಫೈನಲ್ ಪಂದ್ಯ ನೋಡಲು ಕಾತರನಾಗಿದ್ದೇನೆ.
ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಈ ಬಾರಿ ವಿಶ್ವ ಕಪ್ ಗೆಲ್ಲುವ ಫೆವರಿಟ್ ತಂಡವಾಗಿದೆ.
ರನ್ ಮೆಷಿನ್ ವಿರಾಟ್ ಕೋಹ್ಲಿಯ ರನ್ ಹೊಳೆ, ಮೊಹಮದ್ ಶಮಿ ಬಾಲಿಂಗ್ ದಾಳಿ, ಸಂಘಟಿತ ಹೋರಾಟದಿಂದ ಭಾರತ ತಂಡ ಮೂರನೇ ಬಾರಿ ವಿಶ್ವಕಪ್ ಎತ್ತಿಹಿಡಿಯುತ್ತದೆ ಎನ್ನುವ ಅಚಲ ವಿಶ್ವಾಸ ನನಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.