Malpe: ವಿಂಚ್ ಬೋಟ್ ಪ್ಯಾರಾ ಸೈಲಿಂಗ್ ವೇಳೆ ಬಾಲಕ ಪತನ
Saturday, November 18, 2023
ಮಲ್ಪೆ, ನ.18 (ಲೋಕಬಂಧು ವಾರ್ತೆ): ವಿಂಚ್ ಬೋಟ್ ಪ್ಯಾರಾ ಸೈಲಿಂಗ್ ಮಾಡುತ್ತಿದ್ದ ಪ್ರವಾಸಿಗ ಬಾಲಕನೋರ್ವ ಕೆಳಗೆ ಬಿದ್ದು ಗಾಯಗೊಂಡಿರುವ ಘಟನೆ ಶುಕ್ರವಾರ ಮಲ್ಪೆ ಬೀಚ್‌ನಲ್ಲಿ ಸಂಭವಿಸಿದೆ.
ಬೆಂಗಳೂರು ಮೂಲದ ಇಕ್ಷ್ಯಾನ್ ಚೌಧರಿ (12) ಗಾಯಗೊಂಡಿದ್ದಾನೆ.
10 ಮೀಟರ್ ಎತ್ತರದಿಂದ ಬೋಟಿಗೆ ಬಿದ್ದು ತೀವ್ರ ಸ್ವರೂಪದ ಗಾಯಗಳಾಗಿದ್ದು, ತಕ್ಷಣ ಸಮಾಜ ಸೇವಕ ಈಶ್ವರ್ ಮಲ್ಪೆ ಆಸ್ಪತ್ರೆಗೆ ದಾಖಲಿಸಿದರು.
ಸರಿಯಾದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಹಿನ್ನೆಲೆಯಲ್ಲಿ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಮಲ್ಪೆ ಬೀಚ್‌ನಲ್ಲಿ ಕಳೆದ ಒಂದು ತಿಂಗಳ ಹಿಂದೆಯಷ್ಟೇ ಪ್ರವಾಸಿಗರಿಗೆ ಅವಕಾಶ ನೀಡಲಾಗಿತ್ತು. ಅಡ್ವೆಂಚರ್ ಚಟುವಟಿಕೆ, ದೋಣಿ ವಿಹಾರ ಆರಂಭವಾಗಿತ್ತು. ಆದರೆ, ಈ ಕುರಿತು ಟೆಂಡರ್ ಪಡೆದಿರುವವರು ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡಿಲ್ಲ. ಬೋಟಿಂಗ್ ವೇಳೆ ದೋಣಿಯ ಸಾಮರ್ಥ್ಯಕ್ಕಿಂತ ಹೆಚ್ಚು ಜನರನ್ನು ಹತ್ತಿಸಿಕೊಳ್ಳಲಾಗುತ್ತದೆ. ನಿಯಮ ಮೀರಿ ಅಂಥ ಚಟುವಟಿಕೆಗಳ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸುಭಾಷ್ ನಾಯ್ಕ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.