
ಡಿಕೆಶಿ ವಿರುದ್ಧದ ಪ್ರಕರಣ ರಾಜಕೀಯ ಪ್ರೇರಿತ
Friday, November 24, 2023
ಉಡುಪಿ, ನ.24 (ಲೋಕಬಂಧು ವಾರ್ತೆ): ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಹಿಂದಿನ ಸರ್ಕಾರ ಸೇಡಿನ ರಾಜಕಾರಣ ಮಾಡಿ, ಅವರ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. ಹಾಗಾಗಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ಹಿಂದಿನ ಸರ್ಕಾರ ಹೊರಡಿಸಿದ್ದ ಆದೇಶವನ್ನು ವಾಪಸ್ ಪಡೆಯಲು ನಿರ್ಧಾರ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.ಶುಕ್ರವಾರ ನಡೆದ ಕೆಡಿಪಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಅಂದಿನ ಸ್ಪೀಕರ್ ಒಪ್ಪಿಗೆ ಹಾಗೂ ಅಡ್ವಕೇಟ್ ಜನರಲ್ ಅವರಿಂದ ಮಾಹಿತಿ ಪಡೆಯದೆ ಅಂದಿನ ಸಿಎಂ ಮೌಖಿಕವಾಗಿ ಡಿಕೆಶಿ ವಿರುದ್ಧ ತನಿಖೆಗೆ ಆದೇಶ ನೀಡಿದ್ದರು.
ಅದನ್ನೆಲ್ಲ ಗಮನಿಸಿದರೆ ಇದು ರಾಜಕೀಯ ಪ್ರೇರಿತ ಎಂದು ಕಾಣುತ್ತದೆ ಎಂದು ಸಚಿವೆ ಹೆಬ್ಬಾಳ್ಕರ್ ಹೇಳಿದರು