Yakshagana: ಚಿಟ್ಟಾಣಿ ಮತ್ತು ಟಿ.ವಿ.ರಾವ್ ಪ್ರಶಸ್ತಿ ಪ್ರದಾನ
Sunday, November 12, 2023
ಉಡುಪಿ, ನ.12 (ಲೋಕಬಂಧು ವಾರ್ತೆ): ಪರ್ಯಾಯ ಕೃಷ್ಣಾಪುರ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಶ್ರೀ ವೀರಾಂಜನೇಯ ಯಕ್ಷಮಿತ್ರ ಮಂಡಳಿ ಬಂಗಾರಮಕ್ಕಿ ಮತ್ತು ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ಸಹಯೋಗದೊಂದಿಗೆ ನಡೆದ ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಯನ್ನು ಹಿರಿಯ ಹವ್ಯಾಸಿ ಕಲಾವಿದ ಪ್ರೊ. ಎಂ. ಎಲ್. ಸಾಮಗ ಮತ್ತು ಟಿ. ವಿ. ರಾವ್ ಪ್ರಶಸ್ತಿಯನ್ನು ಹವ್ಯಾಸಿ ಯಕ್ಷಗಾನ ಕಲಾವಿದೆ ಬಿ.ಕೆ. ಸುಮತಿ ರಾವ್ ಅವರಿಗೆ ಪ್ರದಾನ ಮಾಡಿದರು.
ಯಕ್ಷಗಾನದಲ್ಲಿ ತಮ್ಮದೇ ಆದ ಛಾಪು ಮೂಡಿಸಿ ಇತರರನ್ನು ಪ್ರೋತ್ಸಾಹಿಸಿದ ಚಿಟ್ಟಾಣಿ ಹೆಸರಿನಲ್ಲಿ ಇಂಥ ಕಾರ್ಯಕ್ರಮ ನಡೆಸುತ್ತಿರುವ ಅಭಿಮಾನಿಗಳು ಮತ್ತು ಪ್ರೇಕ್ಷಕರಿಗೂ ಭಗವಂತನ ಅನುಗ್ರಹವಾಗಲಿ ಎಂದು ಹಾರೈಸಿದರು.
ಉಡುಪಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ್ ರಾವ್, ಚಿಟ್ಟಾಣಿ ಅಭಿಮಾನಿ ಬಳಗದ ಅಧ್ಯಕ್ಷ ಡಾl ತಲ್ಲೂರು ಶಿವರಾಮ ಶೆಟ್ಟಿ, ಕಾರ್ಯದರ್ಶಿ ಎಂ. ಗೋಪಿಕೃಷ್ಣ ರಾವ್, ಸುಬ್ರಹ್ಮಣ್ಯ ಚಿಟ್ಟಾಣಿ ಇದ್ದರು.