ನೇಜಾರು ಪ್ರಕರಣ ಭೇದಿಸಿದ ಪೊಲೀಸರಿಗೆ ಅಭಿನಂದನೆ
Thursday, November 16, 2023
ಉಡುಪಿ, ನ.16 (ಲೋಕಬಂಧು ವಾರ್ತೆ): ಜಿಲ್ಲೆಯ ಜನತೆಯನ್ನು ಬೆಚ್ಚಿ ಬೀಳಿಸಿದ ನೇಜಾರಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣವನ್ನು ಶೀಘ್ರ ಭೇದಿಸಿ ಪ್ರಕರಣದ ಆರೋಪಿ ಸಾಂಗ್ಲಿ ಮೂಲದ ಪ್ರವೀಣ್ ಅರುಣ್ ಚೌಗಲೆಯನ್ನು ಬಂಧಿಸಿರುವ ಜಿಲ್ಲಾ ಪೊಲೀಸರನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಕೊಡವೂರು ಅಭಿನಂದಿಸಿದ್ದಾರೆ.ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದ ಭಯದ ವಾತಾವರಣ ನಿವಾರಣೆಯಾದಂತಾಗಿದೆ ಮತ್ತು ಪೊಲೀಸರ ಮೇಲಿನ ಗೌರವ ಹೆಚ್ಚಾಗಿದೆ ಎಂದವರು ತಿಳಿಸಿದ್ದಾರೆ.