-->
Corruption: ಭ್ರಷ್ಟಾಚಾರ ಆರೋಪ: ಸಚಿವೆ ಹೆಬ್ಬಾಳ್ಕರ್ ವಿರುದ್ಧ ದೂರು

Corruption: ಭ್ರಷ್ಟಾಚಾರ ಆರೋಪ: ಸಚಿವೆ ಹೆಬ್ಬಾಳ್ಕರ್ ವಿರುದ್ಧ ದೂರು

ಬೆಂಗಳೂರು, ನ.17 (ಲೋಕಬಂಧು ವಾರ್ತೆ): ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಲಾಗಿದೆ.
ಮಕ್ಕಳ ಪೌಷ್ಟಿಕ ಆಹಾರ ಸರಬರಾಜಿನಲ್ಲಿ ಅಕ್ರಮ ನಡೆದಿದೆ. 600 ಕೋಟಿ ರೂ.ಗೂ ಹೆಚ್ಚು ಮೊತ್ತದ ಭ್ರಷ್ಟಾಚಾರವಾಗಿದೆ ಎಂದು ವಕೀಲ ನಟರಾಜ ಶರ್ಮ ಲೋಕಾಯಕ್ತಕ್ಕೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕಪ್ಪುಪಟ್ಟಿಯಲ್ಲಿರುವ ಕ್ರಿಸ್ಟಿ ಪ್ರೈಡ್ ಗ್ರಾಂ ಕಂಪನಿಗೆ ಟೆಂಡರ್ ನೀಡಲಾಗಿದೆ. ಗುತ್ತಿಗೆದಾರರಿಂದ ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಗುಣಮಟ್ಟ ಇರುವುದಿಲ್ಲ. ಹಾಗಾಗಿ ಸ್ಥಳೀಯ ಸೇವಾ ಸಂಘಗಳೇ ಆಹಾರ ಪೂರೈಕೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿತ್ತು.

ಆದರೆ, ಆದೇಶ ಉಲ್ಲಂಘನೆ ಮಾಡಿ ಕಪ್ಪುಪಟ್ಟಿಯಲ್ಲಿರುವ ಪೂರೈಕೆ ಕಂಪನಿಗೆ ಟೆಂಡರ್ ನೀಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಧಾನಿ ಕಾರ್ಯದರ್ಶಿ ಜೆ.ಸಿ. ಪ್ರಕಾಶ್, ಇಲಾಖೆ ನಿರ್ದೇಶಕರ ವಿರುದ್ಧವೂ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಲಾಗಿದೆ.

Ads on article

Advertise in articles 1

advertising articles 2

Advertise under the article