ಸಂಭ್ರಮದ ದೀಪೋತ್ಸವ
Friday, November 24, 2023
ಉಡುಪಿ, ನ. 24 (ಲೋಕಬಂಧು ವಾರ್ತೆ): ಶ್ರೀಕೃಷ್ಣಮಠದಲ್ಲಿ ಪರ್ಯಾಯ ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ನೇತೃತ್ವದಲ್ಲಿ ಶುಕ್ರವಾರ ದೀಪೋತ್ಸವ ಆರಂಭಗೊಂಡಿತು.
ಅಷ್ಟಮಠಾಧೀಶರಾದ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು, ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಕಾಣಿಯೂರು ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು, ಅದಮಾರು ಕಿರಿಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉತ್ಸವದಲ್ಲಿ ಭಾಗವಹಿಸಿದ್ದರು.