
Hebbalkar: ಸಚಿವೆ ಹೆಬ್ಬಾಳ್ಕರ್ ವಿರುದ್ಧ ತನಿಖೆಗೆ ಆಗ್ರಹ
Friday, November 24, 2023
ಉಡುಪಿ, ನ.24 (ಲೋಕಬಂಧು ವಾರ್ತೆ): ಅಂಗನವಾಡಿ ಮಕ್ಕಳ ಪೌಷ್ಠಿಕ ಆಹಾರ ಸರಬರಾಜಿನಲ್ಲಿ ಅಕ್ರಮ ಆರೋಪ ಎದುರಿಸುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತನಿಖೆ ನಡೆಸುವಂತೆ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಶುಕ್ರವಾರ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿತು.ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ ನೇತೃತ್ವದಲ್ಲಿ ನೀಡಿದ ಮನವಿಯನ್ನು ಎಡಿಸಿ ಮಮತಾದೇವಿ ಜಿ.ಎಸ್ ಸ್ವೀಕರಿಸಿದರು.
ಬಡ ಮಕ್ಕಳ ಅಪೌಷ್ಠಿಕತೆ ನಿವಾರಣೆಯ ಸದುದ್ದೇಶದಿಂದ ರಾಜ್ಯದ ಎಲ್ಲಾ ಅಂಗನವಾಡಿಗಳಲ್ಲಿ ಪೌಷ್ಠಿಕ ಆಹಾರ ನೀಡುವ ಯೋಜನೆ ಅನುಷ್ಠಾನಗೊಳಿಸಿ ಹಲವಾರು ವರ್ಷದಿಂದ ಜಾರಿ ಮಾಡಲಾಗುತ್ತಿದೆ.
ಅಂಗನವಾಡಿ ಮಕ್ಕಳ ಪೌಷ್ಠಿಕ ಆಹಾರ ಸರಬರಾಜು ಟೆಂಡರ್ ನಲ್ಲಿ ಸುಮಾರು 600 ಕೋ. ರೂ. ಭ್ರಷ್ಟಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಆ ಬಗ್ಗೆ ಸಚಿವೆ ಹೆಬ್ಬಾಳ್ಕರ್ ಮತ್ತಿತರರ ವಿರುದ್ಧ ಲೋಕಾಯುಕ್ತ ಸಂಸ್ಥೆಯಲ್ಲಿ ದೂರು ದಾಖಲಾಗಿದೆ.
ಆ ಬಗ್ಗೆ ಸರಕಾರದಿಂದ ಉನ್ನತ ಮಟ್ಟದ ತನಿಖೆ ನಡೆಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಗೀತಾಂಜಲಿ ಸುವರ್ಣ, ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಮಾಯಾ ಕಾಮತ್, ಸುಜಲ ಸತೀಶ್, ಅಶ್ವಿನಿ ಶೆಟ್ಟಿ, ಸುಧಾ ಪೈ, ಸುಗುಣ, ಸುಜಾತ, ಚಂದ್ರಿಕಾ, ಸುಮಾ, ನೀರಜ ಶೆಟ್ಟಿ, ಲಕ್ಷ್ಮೀ ಹೆಬ್ಬಾರ್, ಶ್ರೀದೇವಿ, ರಾಧಿಕಾ, ಜ್ಯೋತಿ, ಪ್ರತಿಮಾ ನಾಯಕ್, ಆಶಾ ಹೆಗಡೆ ಮೊದಲಾದವರಿದ್ದರು.