-->
Indira Gandhi: ಅವಕಾಶ ವಂಚಿತರ ಕಾಳಜಿ ಮಾಡಿದ ಇಂದಿರಾಗಾಂಧಿ

Indira Gandhi: ಅವಕಾಶ ವಂಚಿತರ ಕಾಳಜಿ ಮಾಡಿದ ಇಂದಿರಾಗಾಂಧಿ

ಬೆಂಗಳೂರು, ನ.19 (ಲೋಕಬಂಧು ವಾರ್ತೆ): ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಹೀಗೆ ಎಲ್ಲ ಅವಕಾಶ ವಂಚಿತರಿಗೆ ಶಕ್ತಿ ತುಂಬುವುದೇ ನಿಜವಾದ ಸ್ವಾತಂತ್ರ್ಯದ ಅರ್ಥ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವಕಾಶ ವಂಚಿತರಿಗಾಗಿ ಶ್ರಮಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು.ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಿ ಮಾತನಾಡಿದರು.


ಅವಕಾಶ ವಂಚಿತರ ಬಗ್ಗೆ ಕಾಳಜಿ, ಉಗ್ರವಾದವನ್ನು ತೀವ್ರವಾಗಿ ಹತ್ತಿಕ್ಕುವ ಕೆಲಸ ಮಾಡಿದರು. ಅದಕ್ಕಾಗಿಯೇ ಪ್ರಾಣ ಕಳೆದುಕೊಂಡರು. ದೇಶಕ್ಕಾಗಿ ಪ್ರಾಣ ತೆತ್ತ ಧೀಮಂತ ಮಹಿಳೆ ಎಂದು ಸಿಎಂ ಸ್ಮರಿಸಿದರು.


ಖಾಸಗಿ ಬ್ಯಾಂಕುಗಳನ್ನು ರಾಷ್ಟ್ರೀಕರಣಗೊಳಿಸಿ ಬ್ಯಾಂಕುಗಳ ಬಾಗಿಲನ್ನು ಬಡವರು, ಸಾಮಾನ್ಯ ರೈತರಿಗೆ ತೆರೆಯುವ ಕೆಲಸ ಮಾಡಿದರು ಎಂದು ಸಿದ್ದರಾಮಯ್ಯ ಹೇಳಿದರು.


1971ರಲ್ಲಿ ಪಾಕಿಸ್ತಾನವನ್ನು ಬಗ್ಗುಬಡಿದು ಬಾಂಗ್ಲಾದೇಶದ ಉದಯಕ್ಕೆ ಕಾರಣರಾಗಿದ್ದ ಇಂದಿರಾ ಗಾಂಧಿಯನ್ನು ಅಂದು ಭಾರತೀಯ ಜನತಾ ಪಕ್ಷದಲ್ಲಿದ್ದ ವಾಜಪೇಯಿ ದುರ್ಗೆ ಎಂದು ಹೇಳಿದ್ದರು ಎಂದು ಸಿದ್ದರಾಮಯ್ಯ ಸ್ಮರಿಸಿದರು.

ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಹಾಗೂ ಸಚಿವ ಬೈರತಿ ಸುರೇಶ್ ಮೊದಲಾದವರಿದ್ದರು.

Ads on article

Advertise in articles 1

advertising articles 2

Advertise under the article