UDUPI: ಹಿರಿಯ ಪತ್ರಕರ್ತ ಶಶಿಧರ ಹೆಮ್ಮಣ್ಣ ನಿಧನ
Friday, November 10, 2023
ಉಡುಪಿ, ನ.10 (ಲೋಕಬಂಧು ವಾರ್ತೆ): ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಯಾಘಾತದಿಂದ ಗುರುವಾರ ರಾತ್ರಿ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು.ಗುರುವಾರ ಬೆಳಿಗ್ಗೆ ಉಡುಪಿಯ ಅವರ ಮನೆಯಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿದ್ದು, ನಗರದ ಅಸ್ಪತ್ರೆಗೆ ದಾಖಲಿಸಿದಾಗ ಹೃದಯಾಘಾತವಾಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲ ಕೆಎಂಸಿ ಅಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.
1991ರಲ್ಲಿ ಕುಂದಪ್ರಭ ಪತ್ರಿಕೆ ಮೂಲಕ ವೃತ್ತಿ ಜೀವನ ಅರಂಭಿಸಿದ ಶಶಿಧರ್, ಕ್ಷಿತಿಜ ಎಂಬ ಸ್ವಂತ ವಾರಪತ್ರಿಕೆ ಅರಂಭಿಸಿದ್ದರು.
ಬಳಿಕ ಈ ಟಿವಿ ಕನ್ನಡ ,ಡಿಡಿ ನ್ಯೂಸ್ ನಲ್ಲಿ ಜಿಲ್ಲಾ ವರದಿಗಾರರಾಗಿದ್ದರು.
ಇತ್ತೀಚೆಗೆ ಕನೆಕ್ಟ್ ಮಿಡಿಯಾ ಸಂಸ್ಥೆ ಹುಟ್ಟುಹಾಕಿದ್ದರು.
ಮೃತರು ತಂದೆ, ತಾಯಿ, ಪತ್ನಿ, ಓರ್ವ ಪುತ್ರ , ನಾಲ್ವರು ಸಹೋದರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಕುಂದಾಪುರ ತಾಲೂಕಿನ ಕಮಲಶಿಲೆ ಸಮೀಪದ ಎಡಮೊಗೆಯಲ್ಲಿರುವ ಸ್ವಗೃಹದಲ್ಲಿ ಶುಕ್ರವಾರ ಬೆಳಿಗ್ಗೆ ನಡೆಯಿತು.
ಸಂತಾಪ
ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ ನಿಧನಕ್ಕೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು, ರಜತ ಮಹೋತ್ಸವ ಸಮಿತಿ ಸಂಚಾಲಕ ಶರೀಫ್ ಕಾರ್ಕಳ, ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ ಹಾಗೂ ಸಂಘದ ಪದಾಧಿಕಾರಿಗಳು, ಸದಸ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್, ಮಂಗಳೂರು ಪ್ರಭಾರಿ ಉದಯಕುಮಾರ್ ಶೆಟ್ಟಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.