ಕ್ಷೀರಾಬ್ದಿ ಪೂಜೆ ಸಂಪನ್ನ
Friday, November 24, 2023
ಉಡುಪಿ, ನ.24 (ಲೋಕಬಂಧು ವಾರ್ತೆ): ಉತ್ಥಾನ ದ್ವಾದಶಿಯಂದು ಶುಕ್ರವಾರ ಸಂಜೆ ಶ್ರೀಕೃಷ್ಣ ಮಠದ ಮಧ್ವ ಸರೋವರದಲ್ಲಿ ಪರ್ಯಾಯ ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ನೇತೃತ್ವದಲ್ಲಿ ಕ್ಷೀರಾಬ್ದಿ ಪೂಜೆ ನಡೆಯಿತು.ಮಧ್ವಸರೋವರದ ಮಧ್ಯದಲ್ಲಿರುವ ಮಂಟಪದಲ್ಲಿ ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು, ಅದಮಾರು ಕಿರಿಯ ಮಠಾಧೀಶ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಯತಿ ಶ್ರೀ ರಾಜರಾಜೇಶ್ವರತೀರ್ಥ ಶ್ರೀಪಾದರು ಹಾಗೂ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಪಟ್ಟದ ದೇವರಿಗೆ ಪೂಜೆ ಸಲ್ಲಿಸಿ, ಕ್ಷೀರಾಬ್ಧಿ ನೆರವೇರಿಸಿದರು.