ಮ.ನಾ. ಹೆಬ್ಬಾರ್ ನಿಧನ
Wednesday, November 15, 2023
ಉಡುಪಿ, ಜ.15 (ಲೋಕಬಂಧು ವಾರ್ತೆ): ನಿವೃತ್ತ ಉಪನ್ಯಾಸಕ, ಹವ್ಯಾಸಿ ಯಕ್ಷಗಾನ ಕಲಾವಿದ, ಅರ್ಥಧಾರಿ, ಕೀರ್ತನಕಾರ, ಪ್ರವಚನಕಾರ, ಲೇಖಕ ಹೀಗೆ ಸಾಂಸ್ಕೃತಿಕ ದೃಷ್ಟಿಯಿಂದ ಬಹುಮುಖಿಯಾಗಿ ತೊಡಗಿಸಿಕೊಂಡಿದ್ದ ಮರೂರು ನಾರಾಯಣ ಹೆಬ್ಬಾರ್ (83) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ನಿಧನರಾದರು.ಅಂಬಲಪಾಡಿ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾಮಂಡಳಿಯ ಆನಂದ ಗಾಣಿಗ ಪ್ರಶಸ್ತಿ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು.
ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಯಕ್ಷಗಾನ ಕಲಾರಂಗದ ಸದಸ್ಯರಾಗಿದ್ದ ಹೆಬ್ಬಾರ್ ನಿಧನಕ್ಕೆ ಸಂಸ್ಥೆ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.