Mangalore: ಹಾಸ್ಟೆಲ್ ಕಟ್ಟಡದಿಂದ ಜಿಗಿದು ವೈದ್ಯ ವಿದ್ಯಾರ್ಥಿನಿ ಆತ್ಮಹತ್ಯೆ
Monday, November 13, 2023
ಮಂಗಳೂರು, ನ.13 (ಲೋಕಬಂಧು ವಾರ್ತೆ): ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಎಂಬಿಬಿಎಸ್ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೆಡಿಕಲ್ ಕಾಲೇಜು ಆವರಣದಲ್ಲಿ ಸೋಮವಾರ ನಡೆದಿದೆ.ಮೃತಪಟ್ಟ ವಿದ್ಯಾರ್ಥಿನಿ ಬೆಳಗಾವಿ ಜಿಲ್ಲೆಯ ಅಥಣಿಯ ಪ್ರಕೃತಿ ಶೆಟ್ಟಿ (20) ಎಂದು ಗುರುತಿಸಲಾಗಿದೆ.
ಆಕೆ ಮೊದಲ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು.
ನಸುಕಿನ ವೇಳೆ ಮೂರು ಗಂಟೆ ವೇಳೆಗೆ ಆಕೆ ಕಾಲೇಜಿನ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ತಾನು ದಪ್ಪಗಿದ್ದೇನೆ ಎಂದು ಆಕೆ ಮಾನಸಿಕ ಖಿನ್ನತೆಗೊಳಗಾಗಿದ್ದು, ಘಟನೆಗೆ ಅದೇ ಕಾರಣ ಎನ್ನಲಾಗಿದೆ.