
Hebbalkar: ಭಾರತ ತಂಡಕ್ಕೆ ಶುಭ ಕೋರಿದ ಸಚಿವೆ ಹೆಬ್ಬಾಳ್ಕರ್
Sunday, November 19, 2023
ಬೆಂಗಳೂರು, ನ.18 (ಲೋಕಬಂಧು ವಾರ್ತೆ): ರೋಹಿತ್ ಶರ್ಮ ಸಾರಥ್ಯದ ಭಾರತ ತಂಡ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರು ಮತ್ತು ಹಿರಿಯ ನಾಗರಕರ ಸಬಲೀಕರಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಶುಭ ಹಾರೈಸಿದ್ದಾರೆ.
ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಜಯ ಗಳಿಸಲಿ ಎಂದವರು ಶುಭ ಕೋರಿದ್ದಾರೆ.
ಈಗಾಗಲೇ ಭಾರತ ತಂಡ, ಟೂರ್ನಿಯಲ್ಲಿ ಸತತ 10 ಪಂದ್ಯಗಳಲ್ಲಿ ಜಯ ದಾಖಲಿಸಿದ್ದು, ಫೈನಲ್ ಪಂದ್ಯದಲ್ಲೂ ಭಾರತ ತಂಡವೇ ಜಯಿಸಲಿ.
ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧವೇ ಗೆಲುವಿನ ಅಭಿಯಾನ ಆರಂಭಿಸಿದ್ದ ಭಾರತ, ಇದೇ ಗೆಲುವಿನ ಲಯವನ್ನು ಪ್ರಶಸ್ತಿಯ ಕೊನೇ ಸುತ್ತಿನ ಹಣಾಹಣಿಯಲ್ಲೂ ಮುಂದುವರಿಸಲಿ ಎಂದು ಸಚಿವೆ ಹೆಬ್ಬಾಳ್ಕರ್ ಶುಭ ಕೋರಿದ್ದಾರೆ.
ನಾಯಕ ರೋಹಿತ್ ಶರ್ಮ, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಕನ್ನಡಿಗ ರಾಹುಲ್ ಅವರನ್ನೊಳಗೊಂಡ ಭಾರತ ತಂಡದಿಂದ ಸಂಘಟಿತ ಹೋರಾಟ ಮೂಡಿಬರಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.