.jpg)
Nejar Case: ನೇಜಾರು ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ
Wednesday, November 22, 2023
ಉಡುಪಿ, ನ.22 (ಲೋಕಬಂಧು ವಾರ್ತೆ): ನೇಜಾರು ತೃಪ್ತಿ ಲೇಔಟ್ ನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗಲೆಗೆ ಡಿ. 5ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಪ್ರಕರಣದ ತನಿಖೆ ಹಿನ್ನೆಲೆಯಲ್ಲಿ ನ. 28ರ ವರೆಗೆ ಪೊಲೀಸ್ ಕಸ್ಟಡಿ ವಿಧಿಸಿ ಉಡುಪಿ ಜಿಲ್ಲಾ ನ್ಯಾಯಾಲಯ ಆದೇಶಿಸಿದ್ದರೂ ಪೊಲೀಸ್ ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬುಧವಾರ ಪೊಲೀಸರು ಆರೋಪಿಯನ್ನು ನ್ಯಾಯಾಲಯದೆದುರು ಹಾಜರುಪಡಿಸಿದ್ದು, ನ್ಯಾಯಾಲಯ ಡಿ. 5ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಪೊಲೀಸ್ ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವಧಿಗೂ ಮುನ್ನ ಆರೋಪಿಯನ್ನು ನ್ಯಾಯಾಲಯದೆದುರು ಹಾಜರುಪಡಿಸಿರುವುದಾಗಿ ಎಸ್.ಪಿ ಡಾl ಕೆ. ಅರುಣ್ ತಿಳಿಸಿದ್ದಾರೆ.