-->
Special Court: ನೇಜಾರು ಕೊಲೆ ಪ್ರಕರಣ: ವಿಶೇಷ ನ್ಯಾಯಾಲಯ ಸ್ಥಾಪನೆ ಸೂಕ್ತ

Special Court: ನೇಜಾರು ಕೊಲೆ ಪ್ರಕರಣ: ವಿಶೇಷ ನ್ಯಾಯಾಲಯ ಸ್ಥಾಪನೆ ಸೂಕ್ತ

ಉಡುಪಿ, ನ.15 (ಲೋಕಬಂಧು ವಾರ್ತೆ): ನೇಜಾರಿನ ಒಂದೇ ಕುಟುಂಬದ ನಾಲ್ವರನ್ನು ಅಮಾನುಷವಾಗಿ ಹತ್ಯೆಗೈದ ಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಪತ್ತೆಹಚ್ಚಿ, ಬಂಧಿಸಿದ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ನೇತೃತ್ವದ ಪೊಲೀಸ್ ಇಲಾಖೆಯನ್ನು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಅಭಿನಂದಿಸಿದ್ದು, ವಿಶೇಷ ನ್ಯಾಯಾಲಯ ಸ್ಥಾಪನೆಗೆ ಸರಕಾರವನ್ನು ಆಗ್ರಹಿಸಿದ್ದಾರೆ.
ಈ ಪ್ರಕರಣದಲ್ಲಿ ಈವರೆಗಿನ ಪೊಲೀಸರ ಕಾರ್ಯವೈಖರಿ ಅಭಿನಂದನಾರ್ಹವಾಗಿದ್ದು, ಪೊಲೀಸರ ಮೇಲೆ ಜನರಿಗಿರುವ ವಿಶ್ವಾಸವನ್ನು ಇಮ್ಮಡಿಗೊಳಿಸಿದೆ.

ಸರ್ಕಾರ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಬೆಂಗಳೂರಿನ ಚರ್ಚ್ ಬ್ಲಾಸ್ಟ್ ನ್ಯಾಯಾಲಯದಲ್ಲಿ ಸದ್ಯ ಯಾವುದೇ ಪ್ರಕರಣ ವಿಚಾರಣೆಗೆ ಬಾಕಿ ಇಲ್ಲದಿರುವ ಹಿನ್ನೆಲೆಯಲ್ಲಿ ನೇಜಾರು ಕೊಲೆ ಪ್ರಕರಣವನ್ನು ಈ ವಿಶೇಷ ನ್ಯಾಯಾಲಯಕ್ಕೆ ವಹಿಸಿ, ಆ ವಿಶೇಷ ನ್ಯಾಯಾಲಯವನ್ನು ಪೀಠಾಸೀನಾಧಿಕಾರಿ, ಪೂರಕ ಸಿಬ್ಬಂದಿ ಮತ್ತು ಪೀಠೋಪಕರಣ ಇತ್ಯಾದಿಗಳೊಂದಿಗೆ ಪ್ರಕರಣ ವಿಲೇವಾರಿ ಆಗುವ ತನಕ ಉಡುಪಿಗೆ ಸ್ಥಳಾಂತರಿಸಬೇಕು ಮತ್ತು ಪ್ರಕರಣಕ್ಕೆ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸುವ ಮೂಲಕ ಸಂತ್ರಸ್ತ ಕುಟುಂಬಕ್ಕೆ ಶೀಘ್ರ ನ್ಯಾಯ ದಾನ ದೊರಕಿಸಲು ಕ್ರಮ ಕೈಗೊಳ್ಳಬೇಕು ಎಂದು ರೆನೋಲ್ಡ್ ಆಗ್ರಹಿಸಿದ್ದಾರೆ.

Ads on article

Advertise in articles 1

advertising articles 2

Advertise under the article