-->
ನೇಜಾರು ಕೊಲೆ ಪ್ರಕರಣ: ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯ ನಿಯೋಗ ಸಾಂತ್ವನ

ನೇಜಾರು ಕೊಲೆ ಪ್ರಕರಣ: ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯ ನಿಯೋಗ ಸಾಂತ್ವನ

ಉಡುಪಿ, ನ.22 (ಲೋಕಬಂಧು ವಾರ್ತೆ): ಇತ್ತೀಚೆಗೆ ನೇಜಾರಿನಲ್ಲಿ ನಡೆದ ತಾಯಿ, ಮಕ್ಕಳ ಕೊಲೆ ನಡೆದ ಮನೆಗೆ ಉಡುಪಿ ಕೆಥೊಲಿಕ್ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಡಾ| ಜೆರಾಲ್ಡ್ ಐಸಾಕ್ ಲೋಬೊ ಅವರ ಪ್ರತಿನಿಧಿಗಳು ಮತ್ತು ಸಮನ್ವಯ ಸೌಹಾರ್ದ ಸಮಿತಿ ತೊಟ್ಟಂ ಪದಾಧಿಕಾರಿಗಳು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಶ್ರೇಷ್ಠ ಗುರು ಮೊನ್ಷಿಂಜೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಘಟನೆ ಬಗ್ಗೆ ಬಿಷಪ್ ಅವರು ಅತೀವ ಆಘಾತ ಮತ್ತು ನೋವು ವ್ಯಕ್ತಪಡಿಸಿದ್ದು, ಇಂಥ ಘಟನೆ ಬುದ್ದಿವಂತರ ಜಿಲ್ಲೆಯಾದ ಉಡುಪಿಯಲ್ಲಿ ನಡೆದಿರುವುದು ಆಘಾತಕಾರಿಯಾಗಿದೆ.
ನೂರ್ ಮೊಹಮ್ಮದ್ ಮತ್ತು ಅವರ ಪುತ್ರ ಹಾಗೂ ಇಡೀ ಕುಟುಂಬದ ನೋವಿನಲ್ಲಿ ಕ್ರೈಸ್ತ ಸಮುದಾಯ ಭಾಗಿಯಾಗಿದೆ.
ಘಟನೆಗೆ ಕಾರಣನಾದ ಆರೋಪಿಯನ್ನು ಕೂಡಲೇ ಬಂಧಿಸಿರುವ ಜಿಲ್ಲೆಯ ಪೊಲೀಸರ ಕಾರ್ಯ ಶ್ಲಾಘನೀಯವಾಗಿದ್ದು, ನೂರ್ ಮೊಹಮ್ಮದ್ ಮತ್ತವರ ಕುಟುಂಬಕ್ಕೆ ಸಾಂತ್ವನ ಹೇಳಿದರು.


ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ| ಡೆನಿಸ್ ಡೆಸಾ, ಸಮನ್ವಯ ಸೌಹಾರ್ದ ಸಮಿತಿ ತೊಟ್ಟಂ ಸಂಚಾಲಕ ಆಗ್ನೆಲ್ ಫೆರ್ನಾಂಡಿಸ್, ಸದಸ್ಯರಾದ ಸುನಿಲ್ ಫೆರ್ನಾಂಡಿಸ್, ಲೆಸ್ಲಿ ಆರೋಝಾ, ಬ್ಲೆಸಿಲ್ಲಾ ಕ್ರಾಸ್ತಾ, ಪ್ರಸಾದ್ ಮತ್ತು ಪ್ರಭಾಕರ್ ಹಾಗೂ ಕಾಂಗ್ರೆಸ್ ಮುಂದಾಳು ಎಂ.ಎ. ಗಫೂರ್ ಮೊದಲಾದವರಿದ್ದರು.

Ads on article

Advertise in articles 1

advertising articles 2

Advertise under the article