BJP: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆ: ಉಡುಪಿ ಜಿಲ್ಲಾ ಬಿಜೆಪಿ ಹರ್ಷ
Friday, November 10, 2023
ಉಡುಪಿ, ನ.10 (ಲೋಕಬಂಧು ವಾರ್ತೆ): ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಸಂಘಟನಾ ಚತುರ, ಶಿಕಾರಿಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ಅವರ ಆಯ್ಕೆಗೆ ಉಡುಪಿ ಜಿಲ್ಲಾ ಬಿಜೆಪಿ ಹರ್ಷ ವ್ಯಕ್ತಪಡಿಸಿದೆ.ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ರಾಜ್ಯಾದ್ಯಂತ ಸದೃಢವಾಗಿ ಬೆಳೆದು ಇನ್ನಷ್ಟು ಎತ್ತರಕ್ಕೇರಿ ಮುಂದಿನ ಲೋಕಸಭಾ ಚುನಾವಣೆ ಸಹಿತ ಎಲ್ಲ ಚುನಾವಣೆಗಳಲ್ಲಿ ಭರ್ಜರಿ ವಿಜಯ ದಾಖಲಿಸುವುದು ನಿಶ್ಚಿತ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ತಿಳಿಸಿದ್ದಾರೆ.
ನೂತನ ರಾಜ್ಯಾಧ್ಯಕ್ಷತೆಯ ಜವಾಬ್ದಾರಿ ವಹಿಸಿಕೊಂಡಿರುವ ಬಿ.ವೈ. ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುವ ಜೊತೆಗೆ ಯುವ ನಾಯಕತ್ವದೊಂದಿಗೆ ಯುವ ಶಕ್ತಿಗೆ ಹೊಸ ಚೈತನ್ಯ ತುಂಬಿದ ಪಕ್ಷ ವರಿಷ್ಠರ ನಿರ್ಧಾರ ಸ್ವಾಗತಾರ್ಹ ಎಂದು ಕುಯಿಲಾಡಿ ತಿಳಿಸಿದ್ದಾರೆ.