
Punishment: ಕಠಿಣ ಶಿಕ್ಷೆಗೆ ಗುರಿಪಡಿಸಿ
Wednesday, November 15, 2023
ಉಡುಪಿ, ನ.15 (ಲೋಕಬಂಧು ವಾರ್ತೆ): ಜಿಲ್ಲೆಯನ್ನೇ ತಲ್ಲಣಗೊಳಿಸಿದ ನೇಜಾರು ತೃಪ್ತಿ ಲೇಔಟ್ ನಲ್ಲಿ ನಡೆದ ಒಂದೇ ಕುಟುಂಬದ ನಾಲ್ಕು ಮಂದಿಯ ಅಮಾನುಷ ಹತ್ಯೆ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸಿದೆ. ಪೊಲೀಸ್ ಇಲಾಖೆ ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿ ಸಿಸಿ ಟಿವಿ ಹಾಗೂ ಇನ್ನಿತರ ಮೂಲಗಳ ಜಾಡು ಹಿಡಿದು ಕೊಲೆ ಆರೋಪಿಯನ್ನು ಬಂಧಿಸಿರುವುದು ಶ್ಲಾಘನೀಯ. ಆರೋಪಿಯನ್ನು ಶೀಘ್ರ ವಿಚಾರಣೆಗೊಳಪಡಿಸಿ ಕಾನೂನಾತ್ಮಕ ಶಿಕ್ಷೆಗೆ ಗುರಿಪಡಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ.
ಉಡುಪಿ ಜಿಲ್ಲೆಯ ಸುಶಿಕ್ಷಿತ ಜನತೆ ಕಾನೂನು ಸುವ್ಯವಸ್ಥೆಯೊಂದಿಗೆ ನಿಭರ್ೀತಿಯಿಂದ ಸಹಬಾಳ್ವೆ ನಡೆಸುತ್ತಿದ್ದು, ಈ ಅಮಾನುಷ ಹತ್ಯೆ ಪ್ರಕರಣ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ.
ಪೊಲೀಸರ ಪರಿಣಾಮಕಾರಿ ಕಾರ್ಯಾಚರಣೆಗೆ ಮೆಚ್ಚುಗೆ ಸೂಚಿಸುವ ಜೊತೆಗೆ ಮುಂದಿನ ದಿನಗಳಲ್ಲಿ ಇಂಥ ಬೀಭತ್ಸ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟ ಇಲಾಖೆಗಳು ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ರೂಪಿಸುವುದು ಸೂಕ್ತ ಎಂದು ಕುಯಿಲಾಡಿ ತಿಳಿಸಿದ್ದಾರೆ.