Rajaneesh Goyal: ರಜನೀಶ್ ಗೋಯಲ್ ರಾಜ್ಯ ಮುಖ್ಯ ಕಾರ್ಯದರ್ಶಿ
Tuesday, November 21, 2023
ಬೆಂಗಳೂರು, ನ.21 (ಲೋಕಬಂಧು ವಾರ್ತೆ): ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.ಪ್ರಸಕ್ತದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಈ ತಿಂಗಳ 30ರಂದು ನಿವೃತ್ತರಾಗುತ್ತಿದ್ದು, ಅವರಿಂದ ತೆರವಾಗುವ ಸ್ಥಾನಕ್ಕೆ 1986ನೇ ಬ್ಯಾಚ್ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರನ್ನು ನೇಮಿಸಲಾಗಿದೆ.
ರಜನೀಶ್ ಗೋಯಲ್ ಪ್ರಸ್ತುತ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಡಿಸೆಂಬರ್ 1ರಂದು ನೂತನ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.