
B Y Vijayendra: ವಿಜಯೇಂದ್ರ ಆಯ್ಕೆ: ಲೋಕಸಭೆ ಚುನಾವಣೆ ಗೆಲುವಿನ ಮುನ್ನುಡಿ
Friday, November 10, 2023
ಉಡುಪಿ, ನ.10 (ಲೋಕಬಂಧು ವಾರ್ತೆ): ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ. ವೈ. ವಿಜಯೇಂದ್ರ ಆಯ್ಕೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವಿಗೆ ಮುನ್ನುಡಿ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ ವಿಶ್ಲೇಷಿಸಿದ್ದಾರೆ.
ಬಿ. ವೈ. ವಿಜಯೇಂದ್ರ ಆಯ್ಕೆ ಪಕ್ಷದ ಶಕ್ತಿಯನ್ನು ಇನ್ನಷ್ಟು ಗಟ್ಟಿಗೊಳಿಸಿದೆ.
ಯುವ ನಾಯಕನಾಗಿ, ಕೊಟ್ಟ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿ ಉತ್ತಮ ಫಲಿತಾಂಶ ದಾಖಲಿಸಿದ ಹಿರಿಮೆ ಬಿ.ವೈ. ವಿಜಯೇಂದ್ರ ಅವರಿಗಿದೆ.
ಅವರ ನಾಯಕತ್ವದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಭರ್ಜರಿ ಗೆಲುವನ್ನು ದಾಖಲಿಸಲಿದೆ ಎಂದು ಹೇಳಿರುವ ಕೆ. ಉದಯಕುಮಾರ್ ಶೆಟ್ಟಿ ಅವರು ಬಿ. ವೈ. ವಿಜಯೇಂದ್ರ ಅವರಿಗೆ ಶುಭ ಹಾರೈಸಿದ್ದಾರೆ.