-->
World Cup: ಜಿಲ್ಲಾ ಕೇಂದ್ರಗಳಲ್ಲಿ ಕ್ರಿಕೆಟ್ ವೀಕ್ಷಣೆಗೆ ಅವಕಾಶ

World Cup: ಜಿಲ್ಲಾ ಕೇಂದ್ರಗಳಲ್ಲಿ ಕ್ರಿಕೆಟ್ ವೀಕ್ಷಣೆಗೆ ಅವಕಾಶ

ಬೆಂಗಳೂರು, ನ.19 (ಲೋಕಬಂಧು ವಾರ್ತೆ): ಅಹ್ಮದಾಬಾದ್ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯುವ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯವನ್ನು ಎಲ್ಲ ಜಿಲ್ಲಾ ಕೇಂದ್ರಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ ದೊಡ್ಡ ಎಲ್‌ಇಡಿ ಪರದೆ ಮೂಲಕ ನೇರ ಪ್ರಸಾರದ ವೀಕ್ಷಣೆಗೆ ವ್ಯವಸ್ಥೆ ಮಾಡುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮೂಲಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.
ಅಲ್ಲದೆ, ಈ ಸಂದರ್ಭದಲ್ಲಿ ಅಗತ್ಯ ಪೊಲೀಸ್ ಭದ್ರತಾ ವ್ಯವಸ್ಥೆ ಕೈಗೊಳ್ಳುವಂತೆಯೂ ಸೂಚನೆ ನೀಡಲಾಗಿದೆ.


ವಿಶ್ವಕಪ್ ಕ್ರಿಕೆಟ್ ಫೈನಲ್ ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಹಣಾಹಣಿ ನಡೆಯಲಿದೆ.


ಇಡೀ ದೇಶದಲ್ಲಿ ಕ್ರಿಕೆಟ್ ಮೇನಿಯಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಭಾರತ- ಆಸ್ಟ್ರೇಲಿಯಾ ನಡುವೆ ಮತ್ತೆ ಫೈನಲ್‌ ನಲ್ಲಿ ಮುಖಾಮುಖಿ ಆಗುತ್ತಿರುವುದು ಮತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಭಾರತ ವಿಜಯಿಯಾಗುವಂತೆ ಹಾರೈಸಿ ವಿಶೇಷ ಪೂಜೆ, ಪ್ರಾರ್ಥನೆ ನಡೆಯುತ್ತಿದೆ. ಗಣ್ಯರು, ಕ್ರಿಕೆಟ್ ಅಭಿಮಾನಿಗಳು ಗೆಲುವಿಗೆ ಹಾರೈಸುತ್ತಿದ್ದಾರೆ.

ಪ್ರಧಾನಿ ಮೋದಿ ಸ್ವತಃ ಕ್ರಿಕೆಟ್ ವೀಕ್ಷಣೆಗೆ ಆಗಮಿಸುವ ಮೂಲಕ ಕ್ರೀಡಾಳುಗಳು ಹಾಗೂ ಕ್ರೀಡಾಪ್ರೇಮಿಗಳನ್ನು ಹುರಿದುಂಬಿಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article