
ತೀವ್ರಗೊಂಡ ಮಳೆ: ಜು.19ರಂದು ಶಾಲೆ, ಪ.ಪೂ. ಕಾಲೇಜುಗಳಿಗೆ ರಜೆ ಘೋಷಣೆ
Thursday, July 18, 2024
ತೀವ್ರಗೊಂಡ ಮಳೆ: ಜು.19ರಂದು ಶಾಲೆ, ಪ.ಪೂ. ಕಾಲೇಜುಗಳಿಗೆ ರಜೆ ಘೋಷಣೆ
ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ
ಜಿಲ್ಲೆಯಾದ್ಯಂತ ಭಾರೀ ಮಳೆಯ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ಜುಲೈ 19ರಂದು ಶುಕ್ರವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ನೀಡಿದ್ದಾರೆ.
ಪದವಿ, ಸ್ನಾತಕೋತ್ತರ, ಇಂಜಿನಿಯರಿಂಗ್, ಡಿಪ್ಲೊಮಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.
ಮುಂದಿನ ದಿನಗಳಲ್ಲಿ ಶನಿವಾರ ಅಥವಾ ಭಾನುವಾರ ತರಗತಿ ನಡೆಸಿ, ರಜೆ ಹೊಂದಾಣಿಕೆ ಮಾಡಿಕೊಳ್ಳುವಂತೆ ಡಿಸಿ ವಿದ್ಯಾಕುಮಾರಿ ತಿಳಿಸಿದ್ದಾರೆ.