
ಜು.20: ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ
Friday, July 19, 2024
ಜು.20: ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ
ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ
ಉಡುಪಿ ಜಿಲ್ಲಾ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ ಜುಲೈ 20ರಂದು ಕರಾವಳಿ ಜಂಕ್ಷನ್ ಬಳಿಯ ಹೋಟೆಲ್ ಶಾರದಾ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ನಡೆಯಲಿದೆ.
ಬೆಳಿಗ್ಗೆ 10ಕ್ಕೆ ಸಕಲೇಶಪುರ ಶಾಸಕ, ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು ಉದ್ಘಾಟಿಸುವರು.
ಅಪರಾಹ್ನ 1 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸುವರು.
ಜಿಲ್ಲೆಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು, ಮಾಜಿ ಶಾಸಕರು, ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಭಾಗವಹಿಸುವರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.