
ಜು.20: ಎಸ್.ಸಿ.ಡಿಸಿಸಿ ಬ್ಯಾಂಕಿನಲ್ಲಿ ಪ್ರತಿಭಾ ಪುರಸ್ಕಾರ
Friday, July 19, 2024
ಜು.20: ಎಸ್.ಸಿ.ಡಿಸಿಸಿ ಬ್ಯಾಂಕಿನಲ್ಲಿ ಪ್ರತಿಭಾ ಪುರಸ್ಕಾರ
ಲೋಕಬಂಧುನ್ಯೂಸ್ ಡೆಸ್ಕ್, ಮಂಗಳೂರು
ಸಹಕಾರಿ ಪಿತಾಮಹ ದಿ। ಮೊಳಹಳ್ಳಿ ಶಿವರಾವ್ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜುಲೈ 20ರಂದು ಸಂಜೆ 4 ಗಂಟೆಗೆ ಎಸ್.ಸಿಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿಯ ಮೊಳಹಳ್ಳಿ ಶಿವರಾವ್ ಸಭಾಭವನದಲ್ಲಿ ನಡೆಯಲಿದೆ.
2023- 2024ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಎಸ್ಎಸ್ಎಲ್.ಸಿ ಹಾಗೂ ಪದವಿ ಪೂರ್ವ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಮತ್ತು ಬ್ಯಾಂಕಿನ ಸಿಬಂದಿಗಳ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ.
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಹಾಗೂ ಎಸ್.ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸುವರು ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ.