ಜು.20: ಶಾಸಕರಿಂದ ಉಡುಪಿ ನಗರಾಭಿವೃದ್ದಿ ಪ್ರಾಧಿಕಾರ ಅರ್ಜಿ ಅಹವಾಲು ಸ್ವೀಕಾರ
Thursday, July 18, 2024
ಜು.20: ಶಾಸಕರಿಂದ ಉಡುಪಿ ನಗರಾಭಿವೃದ್ದಿ ಪ್ರಾಧಿಕಾರ ಅರ್ಜಿ ಅಹವಾಲು ಸ್ವೀಕಾರ
ಲೋಕಬಂಧುನ್ಯೂಸ್ ಡೆಸ್ಕ್,ಉಡುಪಿ
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅರ್ಜಿ, ಅಹವಾಲುಗಳನ್ನು ಜುಲೈ 20ರಂದು ಬೆಳಿಗ್ಗೆ 11.30ರಿಂದ ಪ್ರಾಧಿಕಾರದ ಕಚೇರಿಯಲ್ಲಿ ಉಡುಪಿ ಶಾಸಕ ಯಶಪಾಲ್ ಸುವರ್ಣ ಸ್ವೀಕರಿಸಲಿದ್ದಾರೆ.
ಸಾರ್ವಜನಿಕರು ಪ್ರಾಧಿಕಾರದಲ್ಲಿ ಬಾಕಿ ಉಳಿದಿರುವ ಅರ್ಜಿಗಳು, ಸಮಸ್ಯೆಗಳ ಬಗ್ಗೆ ಶಾಸಕರಿಗೆ ಅಹವಾಲು ನೀಡಬಹುದಾಗಿದೆ.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿರುವರು ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.