250 ಎಲ್.ಕೆಜಿ, ಯುಕೆಜಿ ಕೇಂದ್ರ: ಜು.22ರಂದು ಚಾಲನೆ
Saturday, July 20, 2024
250 ಎಲ್.ಕೆಜಿ, ಯುಕೆಜಿ ಕೇಂದ್ರ: ಜು.22ರಂದು ಚಾಲನೆ
ಲೋಕಬಂಧುನ್ಯೂಸ್ ಡೆಸ್ಕ್, ಬೆಂಗಳೂರು
ಪೂರ್ವ ಪ್ರಾಥಮಿಕ ಶಾಲೆ ಆರಂಭಿಸಲು ಮೊದಲ ಹಂತದಲ್ಲಿ ಬೆಂಗಳೂರಿನ 250 ಅಂಗನವಾಡಿ ಕೇಂದ್ರಗಳನ್ನು ಗುರುತಿಸಿದ್ದು ಹಂತ ಹಂತವಾಗಿ ಎಲ್ಲ ಅಂಗನವಾಡಿ ಕೇಂದ್ರಗಳಲ್ಲೂ ಎಲ್.ಕೆಜಿ, ಯುಕೆಜಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ತಿಳಿಸಿದ್ದಾರೆ.
ಶನಿವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ದೊರೆತ ತಾತ್ವಿಕ ಒಪ್ಪಿಗೆ ಮೇರೆಗೆ ಹಂತ ಹಂತವಾಗಿ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿಯೂ ಎಲ್.ಕೆಜಿ ಮತ್ತು ಯುಕೆಜಿ ಪ್ರಾರಂಭಿಸಲು ಆದೇಶಿಸಲಾಗಿದೆ.
ಅದರಂತೆ ಪ್ರಾಯೋಗಿಕವಾಗಿ ಜುಲೈ 22ರಂದು ಬೆಂಗಳೂರಿನಲ್ಲಿ 250 ಅಂಗನವಾಡಿ ಕೇಂದ್ರಗಳಲ್ಲಿ ಎಲ್.ಕೆಜಿ, ಯುಕೆಜಿ ಪ್ರಾರಂಭಿಸಲಾಗುವುದು ಎಂದರು.