-->
ಪ್ಯಾರೀಸ್ ಒಲಂಪಿಕ್ಸ್ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ಮಂಜೂರು

ಪ್ಯಾರೀಸ್ ಒಲಂಪಿಕ್ಸ್ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ಮಂಜೂರು

ಪ್ಯಾರೀಸ್ ಒಲಂಪಿಕ್ಸ್ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ಮಂಜೂರು

ಲೋಕಬಂಧುನ್ಯೂಸ್ ಡೆಸ್ಕ್, ಬೆಂಗಳೂರು

ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಜೂರು ಮಾಡಿದ್ದಾರೆ.
ಕರ್ನಾಟಕ ಒಲಂಪಿಕ್ ಅಸೋಸಿಯೇಶನ್ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಾ.ಕೆ. ಗೋವಿಂದರಾಜು ಈ ಕುರಿತು‌ ಮನವಿ ಮಾಡಿದ್ದರು.


ಜುಲೈ 26ರಿಂದ ಆಗಸ್ಟ್ 11ರ ವರೆಗೆ ಪ್ಯಾರೀಸ್ ನಲ್ಲಿ ಒಲಂಪಿಕ್ ಕ್ರೀಡಾಕೂಟ ನಡೆಯಲಿದೆ.


ರಾಜ್ಯದ ಕ್ರೀಡಾಪಟುಗಳಾದ ಮಹಿಳಾ ಬ್ಯಾಡ್ಮಿಂಟನ್ ನಲ್ಲಿ ಅಶ್ವಿನಿ ಪೊನ್ನಪ್ಪ, ಮಹಿಳಾ ಗಾಲ್ಸ್ ನಲ್ಲಿ ಅದಿತಿ ಅಶೋಕ್, ಮಹಿಳಾ ಫ್ರೀಸ್ಟೈಲ್ ಈಜು ಸ್ಫರ್ಧೆಯಲ್ಲಿ ಧಿನಿಧಿ ದೇಸಿಂಗೂ , ಮಿಕ್ಸೆಡ್ ರಿಲೇ ಓಟದಲ್ಲಿ ಎಂ.ಆರ್. ಪೂವಮ್ಮ, ಟೇಬಲ್ ಟೆನ್ನಿಸ್ ನಲ್ಲಿ ಅರ್ಚನಾ ಕಾಮತ್, ಪುರುಷರ ಈಜು ಸ್ಫರ್ಧೆಯಲ್ಲಿ ಶ್ರೀಹರಿ ನಟರಾಜ್, ಪುರುಷರ ಟೆನ್ನಿಸ್ ಡಬಲ್ಸ್ ನಲ್ಲಿ ರೋಹನ್ ಬೋಪಣ್ಣ, ಪುರುಷರ 71 ಕೆಜಿ ಬಾಕ್ಸಿಂಗ್ ನಲ್ಲಿ ನಿಶಾಂತ್ ದೇವ್, ಮಿಕ್ಸೆಡ್ ರಿಲೇ ಓಟದಲ್ಲಿ ಮಿಜೋ ಚಾಕೋ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article