7ನೇ ವೇತನ ಆಯೋಗದಂತೆ ವೇತನ ಪರಿಷ್ಕರಣೆ
Tuesday, July 23, 2024
7ನೇ ವೇತನ ಆಯೋಗದಂತೆ ವೇತನ ಪರಿಷ್ಕರಣೆ
ಲೋಕಬಂಧುನ್ಯೂಸ್ ಡೆಸ್ಕ್, ಬೆಂಗಳೂರು
ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಿಸಲು ರಚಿಸಲಾಗಿದ್ದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಆಗಸ್ಟ್ 1ರಿಂದ ಜಾರಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಅದರಂತೆ ಇದೀಗ ಸರ್ಕಾರ, ವೇತನ ಪರಿಷ್ಕರಿಸಿ ಅಧಿಕೃತ ಆದೇಶ ಹೊರಡಿಸಿದೆ.
ಆಯಾ ಸ್ತರದ ಸಿಬ್ಬಂದಿಯ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ಪ್ರಕಟಿಸಲಾಗಿದೆ.
ಈ ಬಗ್ಗೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಆದೇಶ ಹೊರಡಿಸಿದ್ದಾರೆ.