-->
ಬೇಡಿಕೆ ಈಡೇರಿಸಲು ಸ್ಪೀಕರ್ ಗೆ ಮನವಿ

ಬೇಡಿಕೆ ಈಡೇರಿಸಲು ಸ್ಪೀಕರ್ ಗೆ ಮನವಿ

ಬೇಡಿಕೆ ಈಡೇರಿಸಲು ಸ್ಪೀಕರ್ ಗೆ ಮನವಿ

ಲೋಕಬಂಧುನ್ಯೂಸ್ ಡೆಸ್ಕ್, ಬೆಂಗಳೂರು

ಉಡುಪಿಯಲ್ಲಿ ಕೊರಗ ಸಮುದಾಯದ ಸಂಘಟನೆಗಳು ತಮ್ಮ ನ್ಯಾಯ ಸಮ್ಮತ ಬೇಡಿಕೆಗಳಾದ ಭೂಮಿ ಹಕ್ಕು, ವಿದ್ಯಾವಂತ ನಿರುದ್ಯೋಗಿ ಅರ್ಹ ಯುವ ಜನತೆಗೆ ಸರ್ಕಾರಿ ಉದ್ಯೋಗ ಹಾಗೂ ಪರಿಶಿಷ್ಟ ಪಂಗಡದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್ ಅವರನ್ನು ಶಾಸಕ ಯಶಪಾಲ್ ಸುವರ್ಣ ಬುಧವಾರ ಭೇಟಿಯಾಗಿ ಕೊರಗ ಸಮುದಾಯದ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಲು ಸೂಚನೆ ನೀಡುವಂತೆ ಮನವಿ ಮಾಡಿದರು.
ಈಗಾಗಲೇ ರಾಜ್ಯ ಸರ್ಕಾರ ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ಹಾಗೂ ಜಿಪಿಎಸ್ ಕಡ್ಡಾಯ ಅಳವಡಿಕೆಗೆ ನೀಡಿರುವ ಕಾಲಾವಕಾಶ ವಿಸ್ತರಣೆ ಸಹಿತ ವಿವಿಧ ಸಮಸ್ಯೆ ಹಾಗೂ ಟ್ಯಾಕ್ಸಿ ಅಸೋಸಿಯೇಶನ್‌ನ ಬೇಡಿಕೆಗಳ ಬಗ್ಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿದರು.


ಕೊರಗ ಸಮುದಾಯ ಹಾಗೂ ಟ್ಯಾಕ್ಸಿ ಅಸೋಸಿಯೇಶನ್ ಬೇಡಿಕೆಗಳ ಬಗ್ಗೆ ಸದನದಲ್ಲಿ ಶೂನ್ಯ ವೇಳೆಯಲ್ಲಿ ಚರ್ಚಿಸಿ ಸರ್ಕಾರದ ಗಮನ ಸೆಳೆಯಲು ಅವಕಾಶ ನೀಡುವಂತೆ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದರು.

Ads on article

Advertise in articles 1

advertising articles 2

Advertise under the article