ಶಾಲೆಗಳಲ್ಲಿ ಶೈಕ್ಷಣಿಕೇತರ ಚಟುವಟಿಕೆಗಳಿಗೆ ಕಡಿವಾಣ
Friday, July 19, 2024
ಶಾಲೆಗಳಲ್ಲಿ ಶೈಕ್ಷಣಿಕೇತರ ಚಟುವಟಿಕೆಗಳಿಗೆ ಕಡಿವಾಣ
ಲೋಕಬಂಧುನ್ಯೂಸ್ ಡೆಸ್ಕ್, ಮಂಗಳೂರು
ಶಾಲೆಗಳಲ್ಲಿ ಶೈಕ್ಷಣಿಕೇತರ ಚಟುವಟಿಕೆಗ ನಡೆಸದಂತೆ ಜುಲೈ 16ರಂದು ದ.ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ (ಡಿಡಿಪಿಐ)ರು ಜ್ಞಾಪನಾ ಪತ್ರ ಹೊರಡಿಸಿದ್ದಾರೆ.
ಜ್ಞಾಪನಾ ಪತ್ರವನ್ನು ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳಿಸಲಾಗಿದೆ.
ಹಬ್ಬಗಳ ಆಚರಣೆ ಕುರಿತು ನಾಗರಿಕ ಸಮಿತಿ ಮುಖಂಡರು ಶಾಲೆಗಳಿಗೆ ಭೇಟಿ ನೀಡಿ ಅನುಮತಿ ಕೇಳಿದಾಗ ಶಿಕ್ಷಣ ಇಲಾಖೆ ಜ್ಞಾಪನಾ ಪತ್ರ ಹೊರಡಿಸಿರುವುದು ಬೆಳಕಿಗೆ ಬಂದಿದೆ.
ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳ ಮೈದಾನ ಅಥವಾ ಆವರಣವನ್ನು ಯಾವುದೇ ಸಂದರ್ಭದಲ್ಲಿ ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಕ್ಕೆ ಬಳಸಬಾರದು ಮತ್ತು ಅನುಮತಿಯನ್ನೂ ನೀಡಬಾರದು.
ಅಲ್ಲದೆ, ಅನುಮತಿಗಾಗಿ ಡಿಡಿಪಿಐ ಕಚೇರಿಗೂ ಪ್ರಸ್ತಾವನೆ ಸಲ್ಲಿಸಬಾರದು ಎಂದು ಸೂಚಿಸಲಾಗಿದೆ.
ಈ ಆದೇಶ ಉಲ್ಲಂಘಿಸಿದಲ್ಲಿ ಸಂಬಂಧಿತ ಶಾಲಾ ಮುಖ್ಯಸ್ಥರೇ ಹೊಣೆಯಾಗುತ್ತಾರೆ ಎಂದು ಜ್ಞಾಪನಾ ಪತ್ರದಲ್ಲಿ ಉಲ್ಲೇಖಿಸಲಾಗಿದೆ.