ಸಿಎಂ ರಾಜೀನಾಮೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆ ಯತ್ನ
Thursday, July 18, 2024
ಸಿಎಂ ರಾಜೀನಾಮೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆ ಯತ್ನ
ಲೋಕಬಂಧುನ್ಯೂಸ್ ಡೆಸ್ಕ್, ಬೆಂಗಳೂರು
ವಾಲ್ಮೀಕಿ ನಿಗಮದಲ್ಲಿ ಅಕ್ರಮ ಮತ್ತು ಮುಡಾ ಹಗರಣ ಪ್ರಕರಣ ಸಂಬಂಧ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತನ್ನ ಸಮರ ಮುಂದುವರಿಸಿದೆ.
ಹಗರಣ ಹಾಗೂ ಅಕ್ರಮ ಪ್ರಕರಣಗಳ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಗುರುವಾರ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ವಾಲ್ಮೀಕಿ ನಿಗಮದಲ್ಲಿ ಅಕ್ರಮ ಮತ್ತು ಮುಡಾ ಹಗರಣ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಫ್ರೀಡಂ ಪಾರ್ಕ್ ನಿಂದ ವಿಧಾನಸೌಧದ ವರೆಗೆ ಪ್ರತಿಭಟನಾ ರ್ಯಾಲಿ ನಡೆಯಿತು.
ಈ ನಡುವೆ ವಿಧಾನಸೌಧಕ್ಕೆ ಮುತ್ತಿಗೆಗೆ ಯತ್ನಿಸಿದ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.