ವಿಕಸಿತ ಭಾರತಕ್ಕೆ ಶಕ್ತಿ ತುಂಬಿದ ಬಜೆಟ್
Wednesday, July 24, 2024
ವಿಕಸಿತ ಭಾರತಕ್ಕೆ ಶಕ್ತಿ ತುಂಬಿದ ಬಜೆಟ್
ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್, ದೇಶದ ಆರ್ಥಿಕ ವ್ಯವಸ್ಥೆಗೆ ಹೊಸ ಚೈತನ್ಯ ತುಂಬುವ ಮೂಲಕ ವಿಕಸಿತ ಭಾರತ ನಿರ್ಮಾಣಕ್ಕೆ ಶಕ್ತಿ ತುಂಬಿದೆ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ತಿಳಿಸಿದ್ದಾರೆ.
ಮಹಿಳಾ ಸಬಲೀಕರಣಕ್ಕೆ 3 ಲಕ್ಷ ಕೋಟಿ ಅನುದಾನ ಮೀಸಲಿರಿಸಿದ್ದು ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗಿದೆ.
ಸಹಕಾರ ಕ್ಷೇತ್ರವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ರಾಷ್ಟೀಯ ಸಹಕಾರ ನೀತಿ ಜಾರಿಗೊಳಿಸಲು ಮುಂದಾಗಿದೆ.
ಆದಾಯ ತೆರಿಗೆ ಮಿತಿ ಹೆಚ್ಚಳ, ಕೃಷಿ ಅಭಿವೃದ್ದಿಗೆ ಪೂರಕ ಕಾರ್ಯಕ್ರಮ, ಗ್ರಾಮ ಸಡಕ್ ಯೋಜನೆಯಡಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿ, 12 ಹೊಸ ಇಂಡಸ್ಟ್ರಿಯಲ್ ಪಾರ್ಕ್ ನಿರ್ಮಾಣ ಮೂಲಕ ಕೈಗಾರಿಕೆಗಳಿಗೆ ಪ್ರೋತ್ಸಾಹ, ಮುದ್ರಾ ಯೋಜನೆಯ ಸಾಲದ ಮಿತಿಯನ್ನು 20 ಲಕ್ಷಕ್ಕೆ ಏರಿಕೆ ಮಾಡುವ ಮೂಲಕ ದೇಶದ ಆರ್ಥಿಕತೆಯ ಸಮಗ್ರ ಪ್ರಗತಿಗೆ ಹೊಸ ಭಾಷ್ಯ ಬರೆದಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಆರ್ಥಿಕತೆಯಲ್ಲಿ ವಿಶ್ವದ ಪ್ರಬಲ ಆರ್ಥಿಕ ವ್ಯವಸ್ಥೆಗೆ ಮುಂದಡಿಯಿಡುವ ಸಂಕಲ್ಪಕ್ಕೆ ಈ ಬಾರಿಯ ಬಜೆಟ್ ಪೂರಕವಾಗಲಿದೆ ಎಂದು ಯಶಪಾಲ್ ತಿಳಿಸಿದ್ದಾರೆ.