ಛಲವಾದಿ ನಾರಾಯಣಸ್ವಾಮಿ ವಿಪಕ್ಷ ನಾಯಕ
Tuesday, July 23, 2024
ಛಲವಾದಿ ನಾರಾಯಣಸ್ವಾಮಿ ವಿಪಕ್ಷ ನಾಯಕ
ಲೋಕಬಂಧುನ್ಯೂಸ್ ಡೆಸ್ಕ್, ಬೆಂಗಳೂರು
ಕರ್ನಾಟಕ ವಿಧಾನ ಪರಿಷತ್ ವಿಪಕ್ಷ ನಾಯಕನಾಗಿ ಛಲವಾದಿ ನಾರಾಯಣಸ್ವಾಮಿ ನೇಮಕಗೊಂಡಿದ್ದಾರೆ.
ವಿಧಾನ ಪರಿಷತ್ ವಿಪಕ್ಷ ನಾಯನಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಉಡುಪಿ- ಚಿಕ್ಕಮಗಳೂರಿನಿಂದ ಸಂಸತ್ತಿಗೆ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿತ್ತು.
ಇದುವರೆಗೆ ಬಿಜೆಪಿ ವಿಪಕ್ಷ ನಾಯಕನ ಸ್ಥಾನವನ್ನು ಅಧಿಕೃತಗೊಳಿಸಿಲ್ಲ. ಇದೀಗ ಮುಂಗಾರು ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಛಲವಾದಿ ನಾರಾಯಣಸ್ವಾಮಿ ಅವರನ್ನು ವಿಧಾನ ಪರಿಷತ್ ವಿಪಕ್ಷ ನಾಯಕನನ್ನಾಗಿ ನೇಮಕ ಮಾಡಿದೆ.
ವಿಪಕ್ಷ ನಾಯಕನ ಹುದ್ದೆ ನಿರೀಕ್ಷೆಯಲ್ಲಿದ್ದ ಸಿ.ಟಿ ರವಿ ಮತ್ತು ರವಿ ಕುಮಾರ್ ಅವರಿಗೆ ನಿರಾಸೆಯಾಗಿದೆ.