ಶಶಿಧರ್ ಭಟ್ ಚಿಕಿತ್ಸೆ ವೆಚ್ಚ ಭರಿಸಲು ಸಿಎಂ ಭರವಸೆ
Monday, July 22, 2024
ಶಶಿಧರ್ ಭಟ್ ಚಿಕಿತ್ಸೆ ವೆಚ್ಚ ಭರಿಸಲು ಸಿಎಂ ಭರವಸೆ
ಲೋಕಬಂಧುನ್ಯೂಸ್ ಡೆಸ್ಕ್, ಬೆಂಗಳೂರು
ಅನಾರೋಗ್ಯ ಪೀಡಿತರಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತ ಶಶಿಧರ್ ಭಟ್ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ, 'ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಶಿಧರ್ ಭಟ್ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದೆ. ಅವರ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ' ಎಂದು ಟ್ವಿಟ್ ಮಾಡಿದ್ದಾರೆ.