-->
ಸಕಾಲದಲ್ಲಿ ಕಾಮಗಾರಿ ಮುಗಿಸದಿದ್ದರೆ ಸಚಿವರಿಗೆ ದೂರು

ಸಕಾಲದಲ್ಲಿ ಕಾಮಗಾರಿ ಮುಗಿಸದಿದ್ದರೆ ಸಚಿವರಿಗೆ ದೂರು

ಸಕಾಲದಲ್ಲಿ ಕಾಮಗಾರಿ ಮುಗಿಸದಿದ್ದರೆ ಸಚಿವರಿಗೆ ದೂರು

ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ

ರಾಷ್ಟ್ರೀಯ ಹೆದ್ದಾರಿ ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿಯನ್ನು ಶೀಘ್ರ ಮುಗಿಸದಿದ್ದರೆ ಕೇಂದ್ರ ಸಚಿವರಿಗೆ ದೂರು ನೀಡುವುದಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆದ್ದಾರಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು.


ಕಲ್ಯಾಣಪುರ ಸಂತೆಕಟ್ಟೆ ಅಂಡರ್ ಪಾಸ್ ನಿರ್ಮಾಣ ಕಾಮಗಾರಿ ವಿಳಂಬ ನೀತಿಯಿಂದಾಗಿ ಸಾರ್ವಜನಿಕರಿಗೆ ಅನನುಕೂಲವಾಗುತ್ತಿದ್ದು, ನಿತ್ಯ ಅಪಘಾತಗಳು ನಡೆಯುತ್ತಿವೆ. ದ್ವಿಚಕ್ರ ಸವಾರರು ಮತ್ತು ಸಣ್ಣಪುಟ್ಟ ವಾಹನಗಳವರಿಗೆ ಪ್ರಯಾಣಿಸಲಾಗದಷ್ಟು ಪರಿಸ್ಥಿತಿ ಗಂಭೀರವಾಗಿ ಪರಿಗಣಿಸಿದೆ.


ತಿಂಗಳ ಹಿಂದೆ ನಾನು, ಜಿಲ್ಲಾಧಿಕಾರಿಗಳು ಮತ್ತು ಎಸ್.ಪಿ. ಜೊತೆ ಸ್ಥಳಕ್ಕೆ ಭೇಟಿ ಕೊಟ್ಟಾಗ ಆದಷ್ಟು ಬೇಗ ಕಾಮಗಾರಿ ಮುಗಿಸಲಾಗುವುದು ಎಂದು ಇಂಜಿನಿಯರ್ ಮತ್ತು ಗುತ್ತಿಗೆದಾರರು ತಿಳಿಸಿದ್ದನ್ನು ಸಂಸದ ಕೋಟ ಸ್ಮರಿಸಿದರು.


ಇದೀಗ ಓಡಾಡಲಾಗದ ಪರಿಸ್ಥಿತಿ ನಿರ್ಮಾಣವಾದಾಗಲೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮೌನ ವಹಿಸಿರುವುದನ್ನು ಸಹಿಸಲಾಗದು ಎಂದು ಸಂಸದ ಕೋಟ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.


ಈಗ ತೀವ್ರಗೊಂಡಿರುವ ಮಳೆ ಕಡಿಮೆಯಾಗುತ್ತಲೇ ಕಾಮಗಾರಿ ಪ್ರಾರಂಭಿಸದಿದ್ದಲ್ಲಿ ಕೇಂದ್ರ ಸಚಿವರಿಗೆ ದೂರು ನೀಡಿ ಶಿಸ್ತು ಕ್ರಮ ಜರುಗಿಸುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ರಾಷ್ಟ್ರೀಯ ಹೆದ್ದಾರಿ ಅಧಿಕಾರದ ಅಧಿಕಾರಿಗಳಿಗೆ ಸಂಸದ ಕೋಟ ಎಚ್ಚರಿಕೆ ನೀಡಿದರು.


ಸುಧೀರ್ಘ ಮಾತುಕತೆ ನಂತರ ಅಧಿಕಾರಿಗಳು ವಿಪರೀತ ಮಳೆ ನಿಲ್ಲುತ್ತಲೇ ಕಾಮಗಾರಿ ಪ್ರಾರಂಭಿಸುವುದಾಗಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾದೇವಿ, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.

Ads on article

Advertise in articles 1

advertising articles 2

Advertise under the article