ಯಕ್ಷಗಾನ ಪ್ರಾಧಿಕಾರ ರಚನೆಗೆ ಒತ್ತಾಯ
Tuesday, July 23, 2024
ಯಕ್ಷಗಾನ ಪ್ರಾಧಿಕಾರ ರಚನೆಗೆ ಒತ್ತಾಯ
ಲೋಕಬಂಧುನ್ಯೂಸ್ ಡೆಸ್ಕ್, ಬೆಂಗಳೂರು
ಕರ್ನಾಟಕ ಯಕ್ಷಗಾನ ಅಕಾಡೆಮಿಯನ್ನು ಯಕ್ಷಗಾನ ಅಭಿವೃದ್ಧಿ ಪ್ರಾಧಿಕಾರವನ್ನಾಗಿ ಮೇಲ್ದರ್ಜೆಗೇರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಮಂಗಳವಾರ ಸದನದ ಗಮನ ಸೆಳೆದರು.
ಕರಾವಳಿ ಕರ್ನಾಟಕದ ಯಕ್ಷಗಾನದ ಹಿನ್ನೆಲೆ, ವೈಶಿಷ್ಟ್ಯ, ಕಲಾವಿದರ ಬದುಕು ಹಾಗೂ ಧರ್ಮ ರಕ್ಷಣೆ ಮತ್ತು ಕನ್ನಡ ಭಾಷಾಭಿವೃದ್ಧಿಗೆ ಯಕ್ಷಗಾನದ ಕೊಡುಗೆಯನ್ನು ವಿವರಿಸಿದರು.
ಸಾಂಸ್ಕೃತಿಕ ರಾಯಭಾರಿಯಾಗಿ ಯಕ್ಷಗಾನದ ಕಾರ್ಯನಿರ್ವಹಣೆ ಬಗ್ಗೆ ತಿಳಿಸಿ, ಯಕ್ಷಗಾನದ ಬೆಳವಣಿಗೆಗಾಗಿ ಕೈಗೊಳ್ಳಬೇಕಾದ ಅಗತ್ಯ ಕ್ರಮ, ಮಾನ್ಯತೆ ಇತ್ಯಾದಿ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು.
ಯಕ್ಷಗಾನ ಅಭಿವೃದ್ಧಿ ಪ್ರಾಧಿಕಾರವನ್ನಾಗಿ ಮೇಲ್ದರ್ಜೆಗೇರಿಸಿ ವಾರ್ಷಿಕ ಕನಿಷ್ಠ 50 ಕೋಟಿ ರೂ. ಅನುದಾನ ಮೀಸಲಿಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಮನವಿ ಮಾಡಿದರು.
ಈ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸುವುದಾಗಿ ಸಚಿವರು ತಿಳಿಸಿದರು.