ನಗರಸಭೆ ವತಿಯಿಂದ ಡೆಂಗ್ಯೂ ಜಾಗೃತಿ
Saturday, July 20, 2024
ನಗರಸಭೆ ವತಿಯಿಂದ ಡೆಂಗ್ಯೂ ಜಾಗೃತಿ
ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ
ಸ್ಥಳೀಯ ನಗರಸಭೆ ವತಿಯಿಂದ ಡೆಂಗ್ಯೂ ರೋಗ ಹರಡುವಿಕೆ ವಿರುದ್ಧ ಶುಷ್ಕದಿನ (ಡ್ರೈ ಡೇ) ಅಂಗವಾಗಿ ಶುಕ್ರವಾರ ಮುಂಜಾಗ್ರತಾ ಕ್ರಮವಾಗಿ ನಗರದ ವಿವಿಧ ಕಡೆಗಳಲ್ಲಿ ಡೆಂಗ್ಯೂ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಡ್ರೈ ಡೇ ಆಚರಿಸಲಾಯಿತು.
ಸುತ್ತಮುತ್ತ ಎಲ್ಲೂ ನೀರು ನಿಲ್ಲದಂತೆ ಎಚ್ಚರ ವಹಿಸುವಂತೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು. ಹಾಗೂ ಸೊಳ್ಳೆಗಳಿಂದ ರಕ್ಷಣೆ ಪಡೆಯಲು ಬೇವಿನಎಣ್ಣೆ ಹಚ್ಚುವಂತೆ ಸೂಚಿಸಿ ವಿದ್ಯಾರ್ಥಿಗಳಿಗೆ ಬೇವಿನೆಣ್ಣೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ನಗರಸಭಾ ಪೌರಾಯುಕ್ತ ರಾಯಪ್ಪ, ಪರಿಸರ ಅಭಿಯಂತರೆ ಸ್ನೇಹ ಕೆ.ಎಸ್, ಪ್ರಭಾರ ಆರೋಗ್ಯ ನಿರೀಕ್ಷಕ ಸುರೇಂದ್ರ ಹೋಬಳಿದಾರ್, ಡಾ. ಜಿ.ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತ ಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ ಮೊದಲಾದವರಿದ್ದರು.
ಆದಿವುಡುಪಿ, ಬಿಸಿಎಂ ಹಾಸ್ಟೆಲ್ ಮೊದಲಾದೆಡೆಗಳಲ್ಲೂ ಡೆಂಗ್ಯೂ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.