.jpg)
ಇ.ಡಿ. ಅಧಿಕಾರಿಗಳ ವರ್ತನೆ ವಿರೋಧಿಸಿ ಧರಣಿ
Tuesday, July 23, 2024
ಇ.ಡಿ. ಅಧಿಕಾರಿಗಳ ವರ್ತನೆ ವಿರೋಧಿಸಿ ಧರಣಿ
ಲೋಕಬಂಧುನ್ಯೂಸ್ ಡೆಸ್ಕ್, ಬೆಂಗಳೂರು
ವಾಲ್ಮೀಕಿ ನಿಗಮದ ಹಗರಣ ಸಂಬಂಧ ಸಿಎಂ, ಡಿಸಿಎಂ ಹಾಗೂ ಮಾಜಿ ಸಚಿವ ನಾಗೇಂದ್ರ ಹೆಸರು ಹೇಳುವಂತೆ ನಿಗಮದ ಹಿಂದಿನ ಎಂ.ಡಿ ಕಲ್ಲೇಶಪ್ಪ ಅವರಿಗೆ ಕಿರುಕುಳ ನೀಡಿರುವ ಜಾರಿ ನಿರ್ದೇಶನಾಲಯ (ಇ.ಡಿ) ಆಧಿಕಾರಿಗಳ ವರ್ತನೆ ವಿರೋಧಿಸಿ ಕಾಂಗ್ರೆಸ್ ಪಕ್ಷ ವತಿಯಿಂದ ಮಂಗಳವಾರ ವಿಧಾನಸೌಧದ ಆವರಣದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಧರಣಿ ನಡೆಸಲಾಯಿತು.