-->
ಕೇಂದ್ರದ ತಾರತಮ್ಯ ಬಜೆಟ್

ಕೇಂದ್ರದ ತಾರತಮ್ಯ ಬಜೆಟ್

ಕೇಂದ್ರದ ತಾರತಮ್ಯ ಬಜೆಟ್

ಲೋಕಬಂಧುನ್ಯೂಸ್ ಡೆಸ್ಕ್, ಬೆಂಗಳೂರು

ಕರ್ನಾಟಕದ ರಾಜ್ಯಸಭಾ ಸದಸ್ಯೆಯೂ ಆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್, ರಾಜ್ಯದ ನಿರೀಕ್ಷೆಯನ್ನು ಹುಸಿಗೊಳಿಸಿದ್ದು, ಇದೊಂದು ತಾರತಮ್ಯ ಬಜೆಟ್ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಕೇಂದ್ರ ಬಜೆಟ್ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಎನ್.ಡಿಎ ಸರ್ಕಾರದ ಭಾಗವಾಗಿರುವ ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ಭರಪೂರ ಯೋಜನೆಗಳನ್ನು ಘೋಷಿಸಲಾಗಿದೆ. ಆದರೆ, ಕರ್ನಾಟಕ ಸೇರಿದಂತೆ ಕಾಂಗ್ರೆಸ್ ಸರ್ಕಾರವಿರುವ ರಾಜ್ಯಗಳ ನಿರೀಕ್ಷೆ ಹುಸಿಯಾಗಿದೆ.


ಕರ್ನಾಟಕದ ಬಾಕಿ ಇರುವ ಯೋಜನೆಗಳಿಗೂ ಅನುದಾನ ನೀಡಿಲ್ಲ.


ಕೇಂದ್ರ ಬಜೆಟ್ ನಲ್ಲಿ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಚುನಾವಣಾ ಪ್ರಣಾಳಿಕೆಯ ಅಂಶಗಳೇ ಹೆಚ್ಚಿವೆ. ನಮ್ಮ ಪ್ರಣಾಳಿಕೆ ಅಂಶಗಳನ್ನು ಕೇಂದ್ರದ ಎನ್.ಡಿಎ ಸರ್ಕಾರ ಕಳವು ಮಾಡಿದೆ.


ನಿರುದ್ಯೋಗ, ಬೆಲೆ ಏರಿಕೆ, ಹಣದುಬ್ಬರದಂಥ ತುರ್ತು ಸಮಸ್ಯೆಗಳಿಗೆ ಸ್ಪಂದನೆ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article